ಅ.25: ಸತತ ಐದು ದಿನಗಳ ಏರಿಕೆಯ ಬಳಿಕ ಸ್ಥಿರತೆ ಕಾಯ್ದುಕೊಂಡ ಇಂಧನ ದರ
ನವದೆಹಲಿ, ಅಕ್ಟೋಬರ್ 25: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಅ.25, ಸೋಮವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಸತತವಾಗಿ ಏರುಗತಿಯಲ್ಲಿ ಸಾಗುತ್ತಿದ್ದ ಇಂಧನ ದರದಲ್ಲಿ ಸ್ಥಿರತೆ ಕಾಪಾಡಿಕೊಂಡಿದೆ.
ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ನಿರಂತರ ಐದು ದಿನಗಳ ಏರಿಕೆಯ ಬಳಿಕ ಇಂದು ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ನಿರಂತರವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
ಒಂದು ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದಲ್ಲದೇ, ಒಂದು ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿ ದಾಟಿದೆ. ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ತಿಂಗಳಿನಿಂದ ಏರುತ್ತಿರುವ ಕಚ್ಚಾ ತೈಲ ಬೆಲೆಗಳಿಂದ ಇಂಧನ ಬೆಲೆಯಲ್ಲಿ ಅನಿರೀಕ್ಷಿತ ಏರಿಕೆ ಕಂಡಿವೆ. ಆ ಮೂಲಕ ಪೆಟ್ರೋಲ್ ಡೀಸೆಲ್ ಬೆಲೆ ಗರಿಷ್ಠ ಮಟ್ಟ ತಲುಪಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.32 ರೂಪಾಯಿ ಇದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.46 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.38 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.43 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.34 ರೂ.
ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.59 ರೂಪಾಯಿ ಇದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.23 ರೂಪಾಯಿ ಇದೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ಗೆ 116.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.64 ರೂಪಾಯಿ ನಿಗದಿಯಾಗಿದೆ.
ಉತ್ತರಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 104.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.78 ರೂಪಾಯಿ ಇದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 103.55 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.03 ರೂಪಾಯಿ ಇದೆ. ಅದೇ ರೀತಿ ಬಿಹಾರದ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 111.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.39 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.












Click it and Unblock the Notifications