ಸೆ.11: ಸತತ ಆರನೇ ದಿನ ಪೆಟ್ರೋಲ್- ಡೀಸೆಲ್ ದರದಲ್ಲಿ ಏರಿಳಿತವಿಲ್ಲ

ನವದೆಹಲಿ, ಸೆಪ್ಟೆಂಬರ್ 11: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ಇಂದಿನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 11, 2021 ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಇಂದು ಸತತ 6ನೇ ದಿನ ಇಂಧನ ದರ ಸ್ಥಿರವಾಗಿದ್ದು, ಈ ವಾರ ಪೂರ್ತಿ ತೈಲ ಬೆಲೆಗಳು ಒಂದೇ ರೀತಿ ಇವೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಿಂದಿನ ಭಾನುವಾರ, ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಬೆಲೆಯನ್ನು 10ರಿಂದ 15 ಪೈಸೆಯಷ್ಟು ಇಳಿಸಲಾಗಿತ್ತು. ಅಂತೆಯೇ, ಇಂದಿಗೂ ಕಳೆದ ಭಾನುವಾರದ ಬೆಲೆಗಳು ಅನ್ವಯವಾಗುತ್ತಿವೆ.

ಕಳೆದ ಬುಧವಾರ ಇಂಧನ ದರ ಇಳಿಕೆಯತ್ತ ಸಾಗಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್​ಗೆ 15 ಪೈಸೆ ಇಳಿಕೆಯಾಗಿತ್ತು. ಬಳಿಕ ಯಾವುದೇ ಏರಿಳಿತ ಕಂಡು ಬಂದಿಲ್ಲ. ನಂತರದ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಆಗಿದ್ದರೆ, ಡೀಸೆಲ್ ದರ 88.62 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.70 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 107.26 ರೂ. ಮತ್ತು ಡೀಸೆಲ್ ಬೆಲೆ 96.19 ರೂ. ಇದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು IOCL ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ ಮಾಡುತ್ತದೆ. ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನೀವು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಥವಾ SMS ಮೂಲಕ ತಿಳಿದುಕೊಳ್ಳಬಹುದು.

ದೇಶದ ಪ್ರಮುಖ ನಗರಗಳ ಪೆಟ್ರೋಲ್- ಡೀಸೆಲ್ ದರ

ದೇಶದ ಪ್ರಮುಖ ನಗರಗಳ ಪೆಟ್ರೋಲ್- ಡೀಸೆಲ್ ದರ

ದೆಹಲಿ- ಪೆಟ್ರೋಲ್ 101.19 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 88.62 ರೂ.

ಬೆಂಗಳೂರು- ಪೆಟ್ರೋಲ್ 104.70 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ.

ಮುಂಬೈ- ಪೆಟ್ರೋಲ್ 107.26 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 96.19 ರೂ.

ಚೆನ್ನೈ- ಪೆಟ್ರೋಲ್ 98.96 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 93.26 ರೂ.

ಕೋಲ್ಕತ್ತಾ- ಪೆಟ್ರೋಲ್ 101.72 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.84 ರೂ.

ನೋಯ್ಡಾ- ಪೆಟ್ರೋಲ್ 98.52 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.21 ರೂ.

ಜೈಪುರ- ಪೆಟ್ರೋಲ್ 108.17 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 97.76 ರೂ.

ಭೋಪಾಲ್- ಪೆಟ್ರೋಲ್ 109.63 ರೂ. ಮತ್ತು ಡೀಸೆಲ್ 97.43 ರೂ.

ನಿಮ್ಮ ನಗರದ ದರಗಳನ್ನು ಈ ರೀತಿ ಪರಿಶೀಲಿಸಿ

ನಿಮ್ಮ ನಗರದ ದರಗಳನ್ನು ಈ ರೀತಿ ಪರಿಶೀಲಿಸಿ

ದೇಶದ ಮೂರು ತೈಲ ಮಾರುಕಟ್ಟೆ ಕಂಪನಿಗಳಾದ ಎಚ್‌ಪಿಸಿಎಲ್, ಬಿಪಿಸಿಎಲ್(BPCL) ಮತ್ತು ಐಒಸಿ ಬೆಳಿಗ್ಗೆ 6 ಗಂಟೆಯ ನಂತರ ಹೊಸ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನೀಡುತ್ತವೆ. ಹೊಸ ದರಗಳಿಗಾಗಿ, ನೀವು ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮಾಹಿತಿಯನ್ನು ಪಡೆಯಬಹುದು.

ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯು ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ ಬೆಲೆ ಇಳಿಕೆಯತ್ತ ಮನಸ್ಸು ಮಾಡಿವೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ಪೆಟ್ರೋಲ್, ಡೀಸೆಲ್ ದರ ನಿರ್ಧಾರ ಹೇಗೆ?

ಪೆಟ್ರೋಲ್, ಡೀಸೆಲ್ ದರ ನಿರ್ಧಾರ ಹೇಗೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

      ಅಪ್ಪಾ ಅಮ್ಮನ ವಿಷಯದಲ್ಲಿ ನೀರಜ್ ಗೆ ಒಂದು ಆಸೆ ಇತ್ತಂತೆ!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+