ಸೆ.11: ಸತತ ಆರನೇ ದಿನ ಪೆಟ್ರೋಲ್- ಡೀಸೆಲ್ ದರದಲ್ಲಿ ಏರಿಳಿತವಿಲ್ಲ
ನವದೆಹಲಿ, ಸೆಪ್ಟೆಂಬರ್ 11: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ಇಂದಿನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 11, 2021 ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಇಂದು ಸತತ 6ನೇ ದಿನ ಇಂಧನ ದರ ಸ್ಥಿರವಾಗಿದ್ದು, ಈ ವಾರ ಪೂರ್ತಿ ತೈಲ ಬೆಲೆಗಳು ಒಂದೇ ರೀತಿ ಇವೆ. ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಿಂದಿನ ಭಾನುವಾರ, ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಬೆಲೆಯನ್ನು 10ರಿಂದ 15 ಪೈಸೆಯಷ್ಟು ಇಳಿಸಲಾಗಿತ್ತು. ಅಂತೆಯೇ, ಇಂದಿಗೂ ಕಳೆದ ಭಾನುವಾರದ ಬೆಲೆಗಳು ಅನ್ವಯವಾಗುತ್ತಿವೆ.
ಕಳೆದ ಬುಧವಾರ ಇಂಧನ ದರ ಇಳಿಕೆಯತ್ತ ಸಾಗಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 15 ಪೈಸೆ ಇಳಿಕೆಯಾಗಿತ್ತು. ಬಳಿಕ ಯಾವುದೇ ಏರಿಳಿತ ಕಂಡು ಬಂದಿಲ್ಲ. ನಂತರದ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸ್ಥಿರವಾಗಿಯೇ ಉಳಿದಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಆಗಿದ್ದರೆ, ಡೀಸೆಲ್ ದರ 88.62 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.70 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 107.26 ರೂ. ಮತ್ತು ಡೀಸೆಲ್ ಬೆಲೆ 96.19 ರೂ. ಇದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು IOCL ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಿಡುಗಡೆ ಮಾಡುತ್ತದೆ. ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನೀವು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಥವಾ SMS ಮೂಲಕ ತಿಳಿದುಕೊಳ್ಳಬಹುದು.

ದೇಶದ ಪ್ರಮುಖ ನಗರಗಳ ಪೆಟ್ರೋಲ್- ಡೀಸೆಲ್ ದರ
ದೆಹಲಿ- ಪೆಟ್ರೋಲ್ 101.19 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 88.62 ರೂ.
ಬೆಂಗಳೂರು- ಪೆಟ್ರೋಲ್ 104.70 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ.
ಮುಂಬೈ- ಪೆಟ್ರೋಲ್ 107.26 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 96.19 ರೂ.
ಚೆನ್ನೈ- ಪೆಟ್ರೋಲ್ 98.96 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 93.26 ರೂ.
ಕೋಲ್ಕತ್ತಾ- ಪೆಟ್ರೋಲ್ 101.72 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.84 ರೂ.
ನೋಯ್ಡಾ- ಪೆಟ್ರೋಲ್ 98.52 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.21 ರೂ.
ಜೈಪುರ- ಪೆಟ್ರೋಲ್ 108.17 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 97.76 ರೂ.
ಭೋಪಾಲ್- ಪೆಟ್ರೋಲ್ 109.63 ರೂ. ಮತ್ತು ಡೀಸೆಲ್ 97.43 ರೂ.

ನಿಮ್ಮ ನಗರದ ದರಗಳನ್ನು ಈ ರೀತಿ ಪರಿಶೀಲಿಸಿ
ದೇಶದ ಮೂರು ತೈಲ ಮಾರುಕಟ್ಟೆ ಕಂಪನಿಗಳಾದ ಎಚ್‌ಪಿಸಿಎಲ್, ಬಿಪಿಸಿಎಲ್(BPCL) ಮತ್ತು ಐಒಸಿ ಬೆಳಿಗ್ಗೆ 6 ಗಂಟೆಯ ನಂತರ ಹೊಸ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನೀಡುತ್ತವೆ. ಹೊಸ ದರಗಳಿಗಾಗಿ, ನೀವು ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮಾಹಿತಿಯನ್ನು ಪಡೆಯಬಹುದು.
ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯು ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ ಬೆಲೆ ಇಳಿಕೆಯತ್ತ ಮನಸ್ಸು ಮಾಡಿವೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ಪೆಟ್ರೋಲ್, ಡೀಸೆಲ್ ದರ ನಿರ್ಧಾರ ಹೇಗೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
Recommended Video
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications