ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್, ಡೀಸೆಲ್ ಬೆಲೆ ತ್ವರಿತ ಏರಿಕೆ, ಮುಂಬೈನಲ್ಲಿ ಅಧಿಕ

|
Google Oneindia Kannada News

Recommended Video

ಪೆಟ್ರೋಲ್, ಡೀಸೆಲ್ ಬೆಲೆ ತ್ವರಿತ ಏರಿಕೆ, ಮುಂಬೈನಲ್ಲಿ ಅಧಿಕ | Oneindia Kannada

ನವದೆಹಲಿ, ಸೆ. 27: ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ಸತತ ಬೆಲೆ ಏರಿಕೆ ಕಂಡು ಬಂದಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್-ಡಿಸೇಲ್ ಬೆಲೆ ಹೆಚ್ಚಾಗಲು ಕಾರಣವಾಗಿದೆ. ಶುಕ್ರವಾರದಂದು ಮುಂಬೈಯಲ್ಲಿ ಅತ್ಯಧಿಕ ಮೊತ್ತ ದಾಖಲಾಗಿದೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೀಲ್ ಬೆಲೆ 74.34ರು ನಷ್ಟಿದ್ದರೆ, ಮುಂಬೈನಲ್ಲಿ 80ರು ಪ್ರತಿ ಲೀಟರ್ ಮುಟ್ಟಿದೆ. ಆದರೆ ಡೀಸೆಲ್ ದರದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ ಪ್ರತಿ ಲೀಟರ್ ಬೆಲೆ 67.24ರು ನಷ್ಟಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗಮನಿಸಬೇಕಾದ ಐದು ಅಂಶಗಳುಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗಮನಿಸಬೇಕಾದ ಐದು ಅಂಶಗಳು

ಬ್ರೆಂಟ್ ಕಚ್ಚಾ ತೈಲ ಶೇ1.9ರಷ್ಟು ಏರಿಕೆ ಕಂಡಿದೆ. ಕಳೆದ ವಾರ ಶೇ6.7ರಷ್ಟು ಏರಿಕೆಯಾಗಿದ್ದು, 64.28 ಡಾಲರ್ ನಷ್ಟಿದೆ. ಪೆಟ್ರೋಲ್, ಡೀಸೆಲ್ ದರ ನಿಗದಿಯಲ್ಲಿ ಯುಎಸ್ ಡಾಲರ್ ಹಾಗೂ ರುಪಾಯಿ ವಿನಿಮಯ ದರ ಕೂಡಾ ಪ್ರಮುಖ ಪಾತ್ರವಹಿಸಲಿದೆ. ಡಾಲರ್ ದರ ಹೆಚ್ಚಾದರೆ ಭಾರತಕ್ಕೆ ಇನ್ನಷ್ಟು ಆರ್ಥಿಕ ಹೊರೆ ಬೀಳಲಿದೆ. ಗಲ್ಫ್ ರಾಷ್ಟ್ರಗಳಿಂದ ಇಂಧನ ಆಮದು ಮಾಡಿಕೊಳ್ಳಲು ಡಾಲರ್ ಕರೆನ್ಸಿಯನ್ನೇ ಭಾರತ ಬಳಸುತ್ತಿದೆ. ಡಾಲರ್ ಎದುರು ರುಪಾಯಿ ಶುಕ್ರವಾರದಂದು 70.95ರು ನಷ್ಟಿತ್ತು. ಸದ್ಯ 70.79ರು ನಷ್ಟಿದೆ.

Petrol and diesel prices continue to rise on Friday

"ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ನಡೆದ ಡ್ರೋನ್ ದಾಳಿಯ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಭೀತಿ ಆವರಿಸಿತ್ತು. ಆದರೆ, ಭಾರತದ ಇಂಧನ ಸುರಕ್ಷತೆಯ ಅಗತ್ಯಗಳನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ. ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇತರೆ ತೈಲ ಉತ್ಪಾದಕರೊಂದಿಗೆ ರಚನಾತ್ಮಕವಾಗಿ ಕೆಲಸ ಮಾಡುತ್ತಿದ್ದೇವೆ" ಎಂದು ಸೌದಿ ಅರೇಬಿಯಾ ಭರವಸೆ ನೀಡಿದೆ.

ಆದರೆ, ಇರಾನ್ ಮೇಲೆ ಅಮೆರಿಕ ಹೇರುವ ನಿರ್ಬಂಧದ ಮೇಲೆ ಭಾರತ, ಚೀನಾ, ದಕ್ಷಿಣ ಕೊರಿಯಾ, ಜಪಾನ್, ಟರ್ಕಿ, ಇಟಲಿ, ಯುನೈಟೆಡ್ ಅರಬ್ ಎಮಿರೇಟ್ಸ್ ಹಾಗೂ ತೈವಾನ್ ದೇಶಗಳ ಭವಿಷ್ಯ ನಿಂತಿದೆ. ಹೀಗಾಗಿ, ಪೂರೈಕೆ ಕೊರತೆಯಿಂದ ಇಂಧನ ಬೆಲೆ ಏರಿಕೆ ಅನಿವಾರ್ಯ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೇಳಿದೆ.

ಪ್ರಸ್ತುತ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದರೆ ಭಾರತದಲ್ಲಿ ಇಂಧನ ದರ ಏರಿಕೆ ಇನ್ನಷ್ಟು ಕಾಲ ಮುಂದುವರೆಯುವ ಸೂಚನೆ ಸಿಕ್ಕಿದೆ. ಭಾರತದ ತನ್ನ ಇಂಧನ ಬಳಕೆಯ ಶೇ80ರಷ್ಟನ್ನು ಆಮದು ಮಾಡಿಕೊಳ್ಳುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ 15 ದಿನಗಳ ಮಾನದಂಡದ ಆಧಾರದ ಮೇಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬೆಲೆಯನ್ನು ನಿರ್ಧರಿಸಲಿವೆ.

English summary
Petrol and diesel prices continue to rise on Friday. As petrol crossed Rs 80 a litre in Mumbai, consumers will now have to shell out Rs 74.34 for a litre of petrol in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X