Petrol And Diesel Price Today : ಏ.2: ದೇಶದಲ್ಲಿ ಮತ್ತೆ ಇಂಧನ ದರ ಏರಿಕೆ: ನಿಮ್ಮ ನಗರಗಳಲ್ಲಿ ಬೆಲೆಯೆಷ್ಟು?

ನವದೆಹಲಿ, ಏಪ್ರಿಲ್ 2: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಏಪ್ರಿಲ್ 2) ಕೂಡ ಇಂಧನ ಏರಿಕೆ ಕಂಡಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಕಳೆದ 12 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ 7.20 ರೂ. ಹೆಚ್ಚಾಗಿದೆ. ನಿನ್ನೆ (ಶುಕ್ರವಾರ) ಇಂಧನ ದರ ಕಾಯ್ದುಕೊಂಡಿತ್ತು. ಇದೀಗ ಶನಿವಾರವಾದ ಇಂದು(ಏಪ್ರಿಲ್ 2) ಸಹ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಇಂಧನ ಏರಿಕೆ ಕಾಣುವ ಸಾಧ್ಯತೆಯನ್ನು ಅಂದಾಜಿಸಲಾಗಿತ್ತು. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 104.4 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.61 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.61 ರೂ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 102.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 80 ಪೈಸೆ ಹೆಚ್ಚಳದ ಮೂಲಕ 93.87 ರೂ. ದಾಖಲಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.14 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.14 ರೂ.

ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆ ಸಹ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ ದರ 117.57 ರೂ. ಇದ್ದರೆ, ಡೀಸೆಲ್ ಬೆಲೆ 101.79 ರೂ. ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 107.4 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.52 ರೂಪಾಯಿ ಇದೆ. ಕೋಲ್ಕತಾದಲ್ಲಿ ಲೀಟರ್ ಪೆಟ್ರೋಲ್ ದರ 111.3 ರೂ. ಹಾಗೂ ಲೀಟರ್ ಡೀಸೆಲ್ ದರ 96.22 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.05 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಏಪ್ರಿಲ್ 2) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 104.4 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

      ಸಿದ್ದಗಂಗಾ ಮಠದಲ್ಲಿ ಅಪ್ಪು ಫೋಟೋ ಹಿಡಿದು ಕುಣಿದು ಕುಪ್ಪಳಿಸಿದ ಹುಡುಗರು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+