Petrol And Diesel Price Today: ಏ.3: ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ: ನಿಮ್ಮ ನಗರಗಳಲ್ಲಿ ದರ ಎಷ್ಟು?
ನವದೆಹಲಿ, ಏಪ್ರಿಲ್ 3: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಭಾನುವಾರ, ಏಪ್ರಿಲ್ 3) ಕೂಡ ಇಂಧನ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನ ಬೆಲೆ ಏರಿಕೆ ನಂತರ ಪೆಟ್ರೋಲ್ 103.41 ರು; ಡೀಸೆಲ್ 93.87 ರು ಆಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ 11 ಬಾರಿ ಇಂಧನ ಬೆಲೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಮಾ.22ರಿಂದ ಇಂದಿನ ತನಕ ಸರಾಸರಿ 8 ರೂ. ಹೆಚ್ಚಾಗಿದೆ. ಶನಿವಾರದಂತೆ ರವಿವಾರದಂದು ಪೆಟ್ರೋಲ್, ಡೀಸೆಲ್ ಬೆಲೆ ಸರಾಸರಿ 80 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಇಂಧನ ಏರಿಕೆ ಕಾಣುವ ಸಾಧ್ಯತೆಯನ್ನು ಅಂದಾಜಿಸಲಾಗಿತ್ತು. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 104.4 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರಮುಖ ನಗರಗಳಲ್ಲಿ ಎಷ್ಟು ಬದಲಾವಣೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 118.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.61 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 108.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 113.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಲ್ಲಿ ಇಂದಿನ ಇಂಧನ ದರ
ಹೈದರಾಬಾದ್‌ನಲ್ಲಿ ಲೀಟರ್ ಪೆಟ್ರೋಲ್ ದರ 117.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.32 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 103.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.54 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್‌ಗೆ 115.30 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 102.11 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.99 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.83 ರೂಪಾಯಿ ದಾಖಲಾಗಿದೆ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ
ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್‌ಗೆ 120.65 ರೂಪಾಯಿ ಹಾಗೂ ಲೀಟರ್ ಡೀಸೆಲ್‌ಗೆ 103.23 ರೂಪಾಯಿ ದಾಖಲಾಗಿದೆ. ಭೋಪಾಲ್‌ನಲ್ಲಿ ಲೀಟರ್ ಪೆಟ್ರೋಲ್ ದರ 115.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.10ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 103.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.43 ರೂಪಾಯಿ ನಿಗದಿಯಾಗಿದೆ.

ಗುರುಗ್ರಾಮ, ಪಾಟ್ನಾ, ನೋಯ್ಡಾ
ಪ್ರಮುಖ ಮೆಟ್ರೋ ನಗರಗಳನ್ನು ಹೊರತುಪಡಿಸಿದರೆ ಗುರುಗ್ರಾಮ, ಪಾಟ್ನಾ, ನೋಯ್ಡಾ, ಜೈಪುರ, ಭುವನೇಶ್ವರದಲ್ಲಿ ಇಂಧನ ದರದಲ್ಲೂ ಏರಿಕೆ ಕಂಡಿದೆ.
ಪಾಟ್ನಾದಲ್ಲಿ ಪೆಟ್ರೋಲ್ ದರ 114.46 ರೂಪಾಯಿ, ಡೀಸೆಲ್ ದರ 99.35 ರೂ;
ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103. 86 ರೂಪಾಯಿ, ಡೀಸೆಲ್ ದರ 95.10 ರೂ;
ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 103.47 ರೂಪಾಯಿ, ಡೀಸೆಲ್ ದರ 95.02 ರೂ;
ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 110.76 ರೂಪಾಯಿ, ಡೀಸೆಲ್ ದರ 100.51 ರೂ;
ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 116.82 ರೂಪಾಯಿ, ಡೀಸೆಲ್ ದರ 99.77 ರೂ;
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 103.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.59 ರೂಪಾಯಿ ನಿಗದಿಯಾಗಿದೆ












Click it and Unblock the Notifications