ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ. 31: ಸತತವಾಗಿ 5ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 31: ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 84 ಡಾಲರ್ ದಾಟಿ ಮುನ್ನುಗ್ಗುತ್ತಿದ್ದು, ಭಾರತದಲ್ಲಿ ಕಳೆದ ಐದು ದಿನಗಳಲ್ಲಿ ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಾಣುತ್ತಿದೆ.

ಇಂದು (ಅ.31) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 36 ಪೈಸೆ ಹೆಚ್ಚಳವಾಗಿದೆ.

ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲ್ ಬೆಲೆ ಮಾತ್ರ ಏರಿಕೆಯಾಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ನಂತರ ಚೇತರಿಸಿಕೊಂಡು 80 ಪ್ಲಸ್ ಡಾಲರ್ ಮೇಲಕ್ಕೇರಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.

ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕ

ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕ

ಉಳಿದಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 49 ಬಾರಿ ಹಾಗೂ ಡೀಸೆಲ್ 45 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ. ದೆಹಲಿಯಲ್ಲಿ ದರ ಭಾನುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 109.34ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 98.07ರು ಆಗಿದೆ. ದೇಶದ ವಿವಿಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 31ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 83.72 ಯುಎಸ್ ಡಾಲರ್(1 USD=74.93 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ನಂತರ ಸರಾಸರಿ 75 ಪ್ಲಸ್ ಡಾಲರ್ ನಂತೆ ಮುಂದುವರೆದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ನವದೆಹಲಿ: ಪೆಟ್ರೋಲ್ 109.34ರೂ- ಡೀಸೆಲ್ 98.07 ರೂ
ಕೋಲ್ಕತಾ: ಪೆಟ್ರೋಲ್ 109.79 ರೂ- ಡೀಸೆಲ್ 101.19 ರೂ
ಮುಂಬೈ: ಪೆಟ್ರೋಲ್ 115.15 ರೂ- ಡೀಸೆಲ್ 106.23 ರೂ
ಚೆನ್ನೈ: ಪೆಟ್ರೋಲ್ 106.04 ರೂ- ಡೀಸೆಲ್ 102.25 ರೂ
ಬೆಂಗಳೂರು: ಪೆಟ್ರೋಲ್ 113.15 ರೂ- ಡೀಸೆಲ್ 104.09 ರೂ
ತಿರುವನಂತಪುರಂ: ಪೆಟ್ರೋಲ್ 111.59 ರೂ- ಡೀಸೆಲ್ 105.35ರೂ
ಪಾಟ್ನಾ: ಪೆಟ್ರೋಲ್ 113.10 ರೂ- ಡೀಸೆಲ್ 104.71ರೂ
ಹೈದರಾಬಾದ್: ಪೆಟ್ರೋಲ್ 113.72 ರೂ- ಡೀಸೆಲ್ 106.98 ರೂ
ನೋಯ್ಡಾ: ಪೆಟ್ರೋಲ್ 106.67 ರೂ- ಡೀಸೆಲ್ 98.90ರೂ
ಜೈಪುರ: ಪೆಟ್ರೋಲ್ 116.67ರೂ- ಡೀಸೆಲ್ 107.98 ರೂ
(ಮಾಹಿತಿ ಕೃಪೆ: ಗುಡ್ ರಿಟರ್ನ್ಸ್ .ಇನ್)

ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು

ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ. ನೋಯ್ಡಾದಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ 100 ರು ಗಡಿ ದಾಟಿದೆ. ರಾಜಸ್ಥಾನದಲ್ಲಿ ಡೀಸೆಲ್ ಬೆಲೆ ಕೂಡಾ 100 ರು ಪ್ಲಸ್ ಇದೆ. ಚೆನ್ನೈ, ಗುರುಗ್ರಾಮ, ಚಂಡೀಗಢ, ನೋಯ್ಡಾ ಹಾಗೂ ಲಕ್ನೋದಲ್ಲಿ 100ರುಗಿಂತ ಕೆಳಗಿದೆ.

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 121.62 ರೂ ನಷ್ಟಿದೆ, ಡೀಸೆಲ್ ಬೆಲೆ 112.52 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

English summary
Petrol and diesel prices hike On Sunday (October 31) across India, including Chennai. A litre of petrol now costs Rs 105.84, Diesel at Rs 94.57 per litre in Delhi. Check out prices of other Metro cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X