ಅ.16: ಮತ್ತೆ ಏರಿಕೆ ಕಂಡ ಇಂಧನ ದರ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟು?

ನವದೆಹಲಿ, ಅಕ್ಟೋಬರ್ 16: ದೇಶದ ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ತೈಲ ಕಂಪನಿಗಳು, ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿವೆ. ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.16, ಶನಿವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಸರ್ಕಾರಿ ತೈಲ ಕಂಪನಿಗಳಿಂದ ಕಳೆದ ಎರಡು ದಿನಗಳ ಬಳಿಕ ಇಂದು ಮತ್ತೆ ತೈಲ ದರ ಏರಿಕೆ ಕಂಡಿದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಏರಿಕೆ ಮಾಡಲಾಗಿದೆ. ಇದೇ ವೇಳೆ ಒಂದು ಲೀಟರ್ ಡೀಸೆಲ್ ದರ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆ

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ 105.49 ರೂಪಾಯಿ ನಿಗದಿಯಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.22 ರೂಪಾಯಿಗೆ ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ ಹೆಚ್ಚಳವಾಗಿದ್ದು, 111.43 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ದರ 102.15 ರೂಪಾಯಿ ನಿಗದಿಯಾಗಿದೆ. ಇನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.33 ರೂಪಾಯಿಗೆ ಏರಿಕೆಯಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.59 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ರೂ.

ಆದರೆ ಕರ್ನಾಟಕದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 99.63 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೊಲ್ ದರ 109.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.42 ರೂಪಾಯಿ ನಿಗದಿಯಾಗಿದೆ. ಕಳೆದ 2 ವಾರಗಳಲ್ಲಿ ಗಮನಿಸಿದರೆ ಪೆಟ್ರೋಲ್ ಬೆಲೆಯಲ್ಲಿ 15 ಬಾರಿ ಹಾಗೂ ಡೀಸೆಲ್ ದರವನ್ನು 18 ಬಾರಿ ಏರಿಕೆ ಮಾಡಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

      ಮುಂಬೈನಲ್ಲಿ ಕೋವಿಡ್ ಪ್ರಕರಣಗಳು ಸೊನ್ನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+