ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.20: ಇಂಧನ ದರ ಮತ್ತೆ ಏರಿಕೆ; 110 ರೂ. ಸಮೀಪ ಪೆಟ್ರೋಲ್ ಬೆಲೆ!

|
Google Oneindia Kannada News

ನವದೆಹಲಿ, ಅಕ್ಟೋಬರ್ 20: ಸತತ ಎರಡು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಬುಧವಾರ (ಅ.20) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ.

ಬುಧವಾರ ಲೀಟರ್ ಪೆಟ್ರೋಲ್ ದರಯಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿದ್ದರೆ, ಅದೇ ರೀತಿ ಲೀಟರ್ ಡೀಸೆಲ್ ದರದಲ್ಲಿಯೂ ಸಹ 35 ಪೈಸೆ ಹೆಚ್ಚಳವಾಗಿದೆ. ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ಎರಡು ದಿನಗಳಿಂದ ಸ್ಥಿರತೆ ಕಾಪಾಡಿಕೊಂಡಿದ್ದ ಇಂಧನ ಮತ್ತೆ ಏರಿಕೆಯಾಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.20, ಬುಧವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.19 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.19 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.19 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 112.11 ರೂಪಾಯಿ ಇದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 103.31 ರೂಪಾಯಿ ಆಗಿದ್ದರೆ, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.78 ರೂಪಾಯಿ ನಿಗದಿಯಾಗಿದೆ.

ಇನ್ನು ಪ್ರಮುಖ ನಗರಗಳಲ್ಲಿನ ಡೀಸೆಲ್ ದರ ನೋಡುವುದಾದರೆ, ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 94.92 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 102.89 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 99.26 ರೂಪಾಯಿ ಇದ್ದರೆ, ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 98.03 ರೂಪಾಯಿ ಇದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.88 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.88 ರೂ.

ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಮುಂಬೈ ನಗರದಲ್ಲಿ ಇಂಧನ ದರ ಅಧಿಕವಾಗಿದೆ. ಇತ್ತೀಚಿನ ಏರಿಕೆಯಿಂದ ಕೇವಲ ಲೀಟರ್ ಪೆಟ್ರೋಲ್ ದರವೊಂದೇ ಅಲ್ಲದೇ, ಕೆಲವೆಡೆ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದ ದರ ಏರಿಕೆಯ ಬಳಿಕ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗಿದೆ. ಲೀಟರ್ ಪೆಟ್ರೋಲ್ ದರ 109.88 ರೂಪಾಯಿಗೆ ಏರಿಕೆ ಆಗಿದ್ದರೆ, ಲೀಟರ್ ಡೀಸೆಲ್ ದರ 100.72 ರೂಪಾಯಿ ಆಗಿದೆ. ನಿರಂತರವಾಗಿ ಏರಿಕೆ ಕಾಣುತ್ತ ಗರಿಷ್ಠ ಮಟ್ಟ ತಲುಪಿದ ಇಂಧನ ದರ ಕಂಡು ವಾಹನ ಸವಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

Virat Kohli ಅವರ ಹಂಚಿಕೊಂಡ ಈ ವಿಡಿಯೋ ಫುಲ್ ವೈರಲ್ | Oneindia Kannada

English summary
Petrol And Diesel Prices Were Hiked Again in all major cities today (October 20th).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X