ಅ.23: ಸತತ ನಾಲ್ಕನೇ ದಿನ ಏರುಗತಿಯಲ್ಲಿ ಇಂಧನ ದರ: ಯಾವ ನಗರದಲ್ಲಿ ಎಷ್ಟು ಬೆಲೆ?

ನವದೆಹಲಿ, ಅಕ್ಟೋಬರ್ 23: ಸತತ ನಾಲ್ಕು ದಿನಗಳಿಂದ ಇಂಧನ ದರ ಏರಿಕೆಯಾಗುತ್ತಿದ್ದು, ಇಂದು ಶನಿವಾರ (ಅ.23) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ.

ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ ಇಂಧನ ದರ ಏರಿಕೆಯಾಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.23, ಶನಿವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.24 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.24 ರೂ.

ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ದರ 107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ 95.98 ರೂಪಾಯಿ ದಾಖಲಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 110.98 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 110.98 ರೂ.

ವಾಣಿಜ್ಯ ನಗರಿ ಮುಂಬೈನಲ್ಲಿ 34 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 113.08 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 103.97 ರೂಪಾಯಿ ಇದೆ. ಇನ್ನು ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳದ ನಂತರ 104.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 24 ಪೈಸೆ ಏರಿಕೆ ಬಳಿಕ 100.22 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ 37 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 110.98 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 101.86 ರೂಪಾಯಿ ಇದೆ. ತೆಲಂಗಾಣದ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 111.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.66 ರೂಪಾಯಿ ಇದೆ. ಇನ್ನು, ಉತ್ತರಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 104.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.39 ರೂಪಾಯಿ ಇದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

      ಪಾಕ್ ಗೆದ್ದ ತಕ್ಷಣ ವಿರಾಟ್ ಮಾಡಿದ ಕೆಲಸಕ್ಕೆ ಭೇಷ್ ಅನ್ಲೇಬೇಕು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+