ಅ.27: ಎರಡು ದಿನಗಳ ನಂತರ ಮತ್ತೆ ಇಂಧನ ದರ ಹೆಚ್ಚಳ; ಯಾವ ನಗರದಲ್ಲಿ ಎಷ್ಟು ಬೆಲೆ?

ನವದೆಹಲಿ, ಅಕ್ಟೋಬರ್ 27: ಕಳೆದ ಎರಡು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಬುಧವಾರ (ಅ.27) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ.

ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ಎರಡು ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.27, ಬುಧವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.94 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.94 ರೂ.

ಬುಧವಾರ ಇಂಧನ ದರ ಹೆಚ್ಚಳದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.94 ರೂಪಾಯಿ ನಿಗದಿಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.80 ರೂಪಾಯಿ ದಾಖಲಾಗಿದೆ. ಅದೇ ರೀತಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.46 ರೂಪಾಯಿ ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.83 ರೂಪಾಯಿಗೆ ಏರಿಕೆಯಾಗಿದೆ.

 ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 96.67 ರೂ.

ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 96.67 ರೂ.

ಇನ್ನು ಡೀಸೆಲ್ ದರವನ್ನು ಗಮನಿಸಿದಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 96.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಡೀಸೆಲ್ ದರ 104.75 ರೂಪಾಯಿ ಇದೆ. ಅದೇ ರೀತಿ ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 100.92 ರೂಪಾಯಿ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 99.78 ರೂಪಾಯಿಗೆ ಏರಿಕೆಯಾಗಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

Recommended Video

      ನೆಟ್ಟಿಗರ ಕಣ್ಣಿಗೆ ಗುರಿಯಾದ ಮೊಹಮ್ಮದ್ ಶಮಿ ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+