ಅ.28: ಮತ್ತೆ ಏರಿಕೆಯಾದ ಇಂಧನ ದರ; ಪ್ರಮುಖ ನಗರಗಳಲ್ಲಿ ದರವೆಷ್ಟು?

ನವದೆಹಲಿ, ಅಕ್ಟೋಬರ್ 28: ಕಳೆದ ಎರಡು ದಿನಗಳಿಂದ ಇಂಧನ ದರ ಏರಿಕೆಯಾಗುತ್ತಿದ್ದು, ಇಂದು ಗುರುವಾರ (ಅ.28) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ.

ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ಎರಡು ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ನಿನ್ನೆಯಿಂದ ಮತ್ತೆ ಏರಿಕೆಯಾಗಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.28, ಗುರುವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಏರಿಕೆ ಬಳಿಕ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.29 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.29 ರೂ.

ಗುರುವಾರ ಇಂಧನ ದರ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.29 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರವೂ ಸಹ ಏರಿಕೆ ಕಂಡಿದ್ದು, 97.02 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 114.14 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ಬೆಲೆ 105.12 ರೂಪಾಯಿ ದಾಖಲಾಗಿದೆ.

ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.13 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.25 ರೂಪಾಯಿ ನಿಗದಿಯಾಗಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.78 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.14 ರೂಪಾಯಿ ದಾಖಲಾಗಿದೆ. ಇನ್ನು, ಮಧ್ಯಪ್ರದೇಶದ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 116.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.38 ರೂಪಾಯಿ ಇದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 114 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 114 ರೂ.

ತೆಲಂಗಾಣದ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 112.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.84 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 112.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.98 ರೂಪಾಯಿ ನಿಗದಿಯಾಗಿದೆ.

ಅಸ್ಸಾಂನ ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 104.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.87 ರೂಪಾಯಿ ನಿಗದಿಯಾಗಿದೆ. ಉತ್ತರಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.22 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.98 ರೂಪಾಯಿ ಇದೆ. ಇನ್ನು, ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 110.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.25 ರೂಪಾಯಿಗೆ ಏರಿಕೆಯಾಗಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

      Hardik Pandya ಮುಂದಿನ ಪಂದ್ಯದಲ್ಲಿ ಆಡೇ ಆಡ್ತಾರೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+