ಅ.30: ಸತತ ನಾಲ್ಕನೇ ದಿನ ಇಂಧನ ದರ ಏರಿಕೆ; ಪ್ರಮುಖ ನಗರಗಳಲ್ಲಿ ಬೆಲೆಯೆಷ್ಟು?
ನವದೆಹಲಿ, ಅಕ್ಟೋಬರ್ 30: ಕಳೆದ ನಾಲ್ಕು ದಿನಗಳಿಂದ ಇಂಧನ ದರ ಏರಿಕೆಯಾಗುತ್ತಿದ್ದು, ಇಂದು ಶನಿವಾರ (ಅ.30) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿಯಾಗಿದೆ.
ಈಗಾಗಲೇ ದೇಶದಲ್ಲಿ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ನಾಲ್ಕು ದಿನಗಳಿಂದ ಏರಿಕೆಯಾಗುತ್ತಲೇ ಇರುವ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು ಶನಿವಾರ (ಅ.30) ಲೀಟರ್ ಪೆಟ್ರೋಲ್ ಬೆಲೆ ಇಂದು 35 ಪೈಸೆ ಹೆಚ್ಚಳವಾಗಿದೆ ಅದೇ ರೀತಿ ಲೀಟರ್ ಡೀಸೆಲ್ ಬೆಲೆಯಲ್ಲಿಯೂ ಇಂದು 35 ಪೈಸೆ ಹೆಚ್ಚಳವಾಗಿದೆ.
ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.30, ಶನಿವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಏರಿಕೆ ಬಳಿಕ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಈ ಹಬ್ಬದ ಋತುವಿನಲ್ಲಿ ಇಂಧನ ದರ ಏರುಗತಿಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.64 ರೂ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.99 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.73 ರೂಪಾಯಿ ಇದೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 117.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.73 ರೂಪಾಯಿ ಇದೆ. ಉತ್ತರಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.83 ರೂಪಾಯಿ ನಿಗದಿಯಾಗಿದೆ. ಇನ್ನು, ಪಂಜಾಬ್‌ನ ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 104.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.02 ರೂಪಾಯಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 112.79 ರೂ.
ಇಂದು ಇಂಧನ ದರ ಏರಿಕೆಯ ಬಳಿಕ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 112.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 103.68 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 114.81 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 105.86 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.86 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.74 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 101.92 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.












Click it and Unblock the Notifications