Bad News: ಪೆಟ್ರೋಲ್-ಡೀಸೆಲ್ ದರದಲ್ಲಿ 40 ಪೈಸೆ ಇಳಿಸಲ್ಲ ಎಂದ ಐಒಸಿ

ನವದೆಹಲಿ, ನವೆಂಬರ್ 1: ಭಾರತೀಯ ವಾಹನ ಸವಾರರಿಗೆ ಸಿಹಿಸುದ್ದಿ ಕೊಟ್ಟಿದ್ದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ನಿರ್ಧಾರವನ್ನು ವಾಪಸ್ ತೆಗೆದುಕೊಂಡಿದೆ. ಆ ಮೂಲಕ ಪೆಟ್ರೋಲ್-ಡೀಸೆಲ್ ದರವು ಯಥಾವತ್ತಾಗಿ ಮುಂದುವರಿಯಲಿದೆ.

ಕಳೆದ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀ.ಗೆ 40 ಪೈಸೆ ಇಳಿಕೆ ಮಾಡಲಾಗುವುದು ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೇಳಿತ್ತು. ಮಂಗಳವಾರವೇ ಪರಿಷ್ಕೃತ ದರವು ಜಾರಿಗೆ ಬರಲಿದೆ ಎಂದು ತಿಳಿಸಿತ್ತು. ಆದರೆ ಇದೀಗ ಇಂಧನ ದರದಲ್ಲಿ ಯಾವುದೇ ಕಡಿತ ಮಾಡುವುದಿಲ್ಲ ಎಂದು ಐಒಸಿ ಸ್ಪಷ್ಟಪಡಿಸಿದೆ.

ದೇಶದಲ್ಲಿ ನವೆಂಬರ್ 1ರಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ 40 ಪೈಸೆ ಕಡಿತವಾಗುವುದಿಲ್ಲ. ಬದಲಿಗೆ ಈ ಮೊದಲಿನ ದರವೇ ಮುಂದುವರಿಯಲಿದೆ. ಇದರ ಮಧ್ಯೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಅದರಂತೆ ನವೆಂಬರ್ 1ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 107.44 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.89 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 106.31 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.27 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 94.83 ಯುಎಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+