ಮಾರ್ಚ್‌ 06ರಂದು ಈ ನಗರದಲ್ಲಿ ಮಾತ್ರ ಪೆಟ್ರೋಲ್, ದರ ಇಳಿಕೆ

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಶನಿವಾರ(ಮಾರ್ಚ್ 6)ದಂದು ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಶನಿವಾರದ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ.ಇದಕ್ಕೂ ಮುನ್ನ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್ ಹಾಗೂ ಡೀಸೆಲ್ 4.99 ಪ್ರತಿ ಲೀಟರ್ ನಷ್ಟು ಏರಿಕೆಯಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ 81.47 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಆದರೆ, ದೇಶದ ಒಂದು ನಗರದಲ್ಲಿ ಮಾತ್ರ ಪೆಟ್ರೋಲ್ ದರ ಇಳಿಕೆಯಾಗಿದೆ. ಒಡಿಶಾದ ಭುವನೇಶ್ವರದಲ್ಲಿ ಪೆಟ್ರೋಲ್ ಅಲ್ಲದೆ ಡೀಸೆಲ್ ದರ ಕೂಡಾ ಇಳಿಕೆಯಾಗಿದೆ. ಶುಕ್ರವಾರದಂದು ಪೆಟ್ರೋಲ್ ಪ್ರತಿ ಲೀಟರ್ ಬೆಲೆ 92.19 ರು ಹಾಗೂ ಡೀಸೆಲ್ ಬೆಲೆ 89.07 ರು ಪ್ರತಿ ಲೀಟರ್ ನಷ್ಟಿತ್ತು. ಆದರೆ, ಶನಿವಾರದಂದು ಪೆಟ್ರೋಲ್ ಬೆಲೆ 91.90 ರು ಹಾಗೂ ಡೀಸೆಲ್ ಬೆಲೆ 88.79 ರುಗೆ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಕ್ಕೆ ಹಣಕಾಸು ಸಚಿವಾಲಯ ಚಿಂತನೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 2.62% ಏರಿಕೆ ಕಂಡು 69.36 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.

Petrol and Diesel Prices On March 06: Check Latest Rate Here

ಪ್ರಮುಖ ನಗರಗಳಲ್ಲಿ ಮಾರ್ಚ್ 6ರ ಇಂಧನ ದರ

ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 91.17 ರೂ- 81.47 ರೂ
ಮುಂಬೈ: 97.57 ರೂ - 88.60 ರೂ
ಚೆನ್ನೈ: 93.25 ರೂ- 86.45 ರೂ
ಬೆಂಗಳೂರು: 94.22 ರೂ - 86.35 ರೂ
ಕೋಲ್ಕತ್ತಾ: 91.35 ರೂ-84.35 ರೂ
ನೋಯ್ಡಾ: 89.23 ರೂ-81.79 ರೂ

Petrol and Diesel Prices On March 06: Check Latest Rate Here

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+