ಮಾರ್ಚ್‌ 21: ಯಾವ ನಗರದಲ್ಲೂ ಪೆಟ್ರೋಲ್, ದರ ಏರಿಕೆಯಿಲ್ಲ

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ರವಿವಾರ(ಮಾರ್ಚ್ 21)ದಂದು ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಸತತವಾಗಿ 22 ದಿನಗಳ ಕಾಲ ತೈಲ ದರವನ್ನು ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಪರಿಷ್ಕರಣೆ ಮಾಡಿಲ್ಲ.

ಒಟ್ಟಾರೆ ಈ ವರ್ಷದಲ್ಲಿ ಇಂಧನ ದರ 26 ಬಾರಿ ಪರಿಷ್ಕರಣೆಗೊಂಡಿದ್ದು, ಪೆಟ್ರೋಲ್ ಒಟ್ಟು 7.46 ಪ್ರತಿ ಲೀಟರ್ ಹಾಗೂ ಡೀಸೆಲ್ 7.60 ಪ್ರತಿ ಲೀಟರ್ ನಷ್ಟು ಏರಿಕೆಯಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ 81.47 ರೂಪಾಯಿ ಇದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

Petrol and Diesel Prices On March 21: Check Latest Rate Here

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 6% ಇಳಿಕೆ ಕಂಡು 64.5 ಯುಎಸ್ ಡಾಲರ್ ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಪ್ರಮುಖ ನಗರಗಳಲ್ಲಿ ಮಾರ್ಚ್ 8ರ ಇಂಧನ ದರ

ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 91.17 ರೂ- 81.47 ರೂ
ಮುಂಬೈ: 97.57 ರೂ - 88.60 ರೂ
ಚೆನ್ನೈ: 93.11 ರೂ- 86.45 ರೂ
ಬೆಂಗಳೂರು: 94.29 ರೂ(7 ಪೈಸೆ ಏರಿಕೆ) - 86.42 ರೂ(5 ಪೈಸೆ ಏರಿಕೆ)
ಕೋಲ್ಕತ್ತಾ: 91.35 ರೂ-84.35 ರೂ
ನೋಯ್ಡಾ: 89.36 ರೂ-81.89 ರೂ(10 ಪೈಸೆ ಏರಿಕೆ)

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+