ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ರವಿವಾರ(ಮಾರ್ಚ್ 28)ದಂದು ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ಆದರೆ, ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ ಮಾಡಿ, ಪರಿಷ್ಕೃತ ದರ ಪ್ರಕಟಿಸಿದ್ದವು. ಈಗ ಸತರ ಮೂರು ದಿನಗಳಿಂದ ಯಾವುದೇ ಬದಲಾವಣೆಯಾಗಿಲ್ಲ.
ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.
ಒಟ್ಟಾರೆ, ಈ ವರ್ಷದಲ್ಲಿ ಇಂಧನ ದರ 26 ಬಾರಿ ಪರಿಷ್ಕರಣೆಗೊಂಡಿದ್ದು, ಪೆಟ್ರೋಲ್ ಒಟ್ಟು 7.46 ಪ್ರತಿ ಲೀಟರ್ ಹಾಗೂ ಡೀಸೆಲ್ 7.60 ಪ್ರತಿ ಲೀಟರ್ ನಷ್ಟು ಏರಿಕೆಯಾಗಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ 90.78 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ 81.10 ರೂಪಾಯಿ ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 64.5 ಯುಎಸ್ ಡಾಲರ್ ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.
ಪ್ರಮುಖ ನಗರಗಳಲ್ಲಿ ಮಾರ್ಚ್ 28ರ ಇಂಧನ ದರ
ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 90.78 ರೂ- 81.10 ರೂ
ಮುಂಬೈ: 97.19 ರೂ - 88.20 ರೂ
ಚೆನ್ನೈ: 92.77 ರೂ- 86.10 ರೂ
ಬೆಂಗಳೂರು: 93.82 ರೂ - 85.99 ರೂ
ಕೋಲ್ಕತ್ತಾ: 90.98 ರೂ-83.98 ರೂ
ಪುಣೆ: 96.83 ರೂ-86.51 ರೂ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications