ಸುಂಕ ಇಳಿಕೆ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ?

ನವದೆಹಲಿ, ನವೆಂಬರ್ 04: ಜಾಗತಿಕವಾಗಿ ಕಚ್ಚಾತೈಲ ಬೆಲೆ ಕುಸಿತ, ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಪರಿಣಾಮ ಭಾರತದಲ್ಲಿ ಇಂದು ಇಂಧನ ದರ ಭಾರಿ ಇಳಿಕೆ ಕಂಡಿದೆ.

ಕಳೆದ ಏಳು ದಿನಗಳಲ್ಲಿ ಇಂಧನ ದರ ಏರಿಕೆ ಮಾಡಲಾಗಿತ್ತು. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಂಡಿತ್ತು.

ಮೆಟ್ರೋ ನಗರಗಳಲ್ಲಿ ಇಂದು (ನ.4) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮಂಗಳವಾರದಂದು ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 36 ಪೈಸೆ ಹೆಚ್ಚಳವಾಗಿತ್ತು. ಗುರುವಾರದಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ 6.07 ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 11.75 ಪ್ರತಿ ಲೀಟರ್ ನಂತೆ ಇಳಿಕೆ ಯಾಗಿದೆ.

ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿತ್ತು. ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ನಂತರ ಚೇತರಿಸಿಕೊಂಡು 85 ಪ್ಲಸ್ ಡಾಲರ್ ಮೇಲಕ್ಕೇರಿತ್ತು.

ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕ

ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕ

ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 110 ರು ಗಿಂತ ತಗ್ಗಿರಲಿಲ್ಲ. ಈಗ 9-10 ರಾಜ್ಯಗಳಲ್ಲಿ ಇಂದು ಬೆಲೆ ಇಳಿಕೆಯಾಗಲಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 56 ಬಾರಿ ಹಾಗೂ ಡೀಸೆಲ್ 51 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 13 ರು ಪ್ರತಿ ಲೀಟರ್ ಹಾಗೂ ಡೀಸೆಲ್ 11 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 110 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 04ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 81.38 ಯುಎಸ್ ಡಾಲರ್(1 USD=74.35ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ನಂತರ ಸರಾಸರಿ 80-85 ಪ್ಲಸ್ ಡಾಲರ್‌ನಂತೆ ಮುಂದುವರೆದಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ನವದೆಹಲಿ: ಪೆಟ್ರೋಲ್ 103.97ರೂ- ಡೀಸೆಲ್ 98.42 ರೂ
ಕೋಲ್ಕತಾ: ಪೆಟ್ರೋಲ್ 104.67 ರೂ- ಡೀಸೆಲ್ 101.56ರೂ
ಮುಂಬೈ: ಪೆಟ್ರೋಲ್ 109.98 ರೂ- ಡೀಸೆಲ್ 106.62 ರೂ
ಚೆನ್ನೈ: ಪೆಟ್ರೋಲ್ 101.40 ರೂ- ಡೀಸೆಲ್ 102.59 ರೂ
ಬೆಂಗಳೂರು: ಪೆಟ್ರೋಲ್ 107.64 ರೂ- ಡೀಸೆಲ್ 104.50 ರೂ
ತಿರುವನಂತಪುರಂ: ಪೆಟ್ರೋಲ್ 106.36 ರೂ- ಡೀಸೆಲ್ 105.85ರೂ
ಪಾಟ್ನಾ: ಪೆಟ್ರೋಲ್ 107.92 ರೂ- ಡೀಸೆಲ್ 105.07ರೂ
ಹೈದರಾಬಾದ್: ಪೆಟ್ರೋಲ್ 108.20 ರೂ- ಡೀಸೆಲ್ 107.40 ರೂ
ನೋಯ್ಡಾ: ಪೆಟ್ರೋಲ್ 101.29 ರೂ- ಡೀಸೆಲ್ 99.12ರೂ
ಜೈಪುರ: ಪೆಟ್ರೋಲ್ 110.76 ರೂ- ಡೀಸೆಲ್ 108.39 ರೂ
(ಮಾಹಿತಿ ಕೃಪೆ: ಗುಡ್ ರಿಟರ್ನ್ಸ್ .ಇನ್)

ಈ ದರ ಪಟ್ಟಿ ಸಂಜೆ ವೇಳೆಗೆ ಇನ್ನಷ್ಟು ಪರಿಷ್ಕೃತಗೊಳ್ಳಲಿದೆ..ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ತಗ್ಗಲಿದೆ. ಇಲ್ಲಿ ಕೇಂದ್ರದ ಸುಂಕ ಇಳಿಕೆ ಬಳಿಕದ ದರ ನೀಡಲಾಗಿದೆ.

Recommended Video

    ಧನಲಕ್ಷ್ಮಿ ಪೂಜೆಯನ್ನು ಮಾಡುವಾಗ ಅಪ್ಪಿತಪ್ಪಿಯೂ ಹೀಗೆ ಮಾಡ್ಲೇಬೇಡಿ | Oneindia Kannada
    ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

    ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

    ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 1116.30 ರೂ ನಷ್ಟಿದೆ, ಡೀಸೆಲ್ ಬೆಲೆ 113.21 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 115 ರೂ ಗಡಿ ದಾಟಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+