ಡಿ.8ರಂದು ಭಾರತದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟು?
ನವದೆಹಲಿ, ಡಿಸೆಂಬರ್ 08: ಸುಮಾರು 34 ದಿನಗಳ ಹಿಂದೆ ಕೇಂದ್ರ ಸರ್ಕಾರದಿಂದ ಇಂಧನದ ಮೇಲಿನ ತೆರಿಗೆ ತಗ್ಗಿಸಲಾಯಿತು. ಇದಕ್ಕೂ ಮುನ್ನ, ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿ, ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 101 ರು ಗಿಂತ ತಗ್ಗಿರಲಿಲ್ಲ. ಈಗ ಬಹುತೇಕ ರಾಜ್ಯಗಳಲ್ಲಿ ಈಗ ಬೆಲೆ ಇಳಿಕೆಯಾಗಿದೆ. ದೆಹಲಿ, ಗುರುಗ್ರಾಮ, ಚಂಡೀಗಢ, ಲಕ್ನೋ ಹಾಗೂ ನೋಯ್ಡಾದಲ್ಲಿ ಬೆಲೆ 100 ರು ಗಿಂತ ಕೆಳಗಿದೆ. ಅಂಡಮಾನ್ ಹಾಗೂ ನಿಕೋಬಾರ್‌ನಲ್ಲಿ ಪೆಟ್ರೋಲ್ 82.96 ರು ಪ್ರತಿ ಲೀಟರ್ ಇದ್ದು ದೇಶದಲ್ಲಿ ಕಡಿಮೆ ಬೆಲೆ ಇದೆ. ಡೀಸೆಲ್ ಬೆಲೆ 77.13 ರು ಇದೆ. ಇಟಾನಗರದಲ್ಲಿ ಪೆಟ್ರೋಲ್ 92.02 ರು ಇದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.
ದೆಹಲಿಯಲ್ಲಿ ದರ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 95.41 ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 86.67ರು ಆಗಿದೆ. ದೇಶದ ವಿವಿಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ಮೆಟ್ರೋ ನಗರಗಳಲ್ಲಿ ಇಂದಿನ ಇಂಧನ ದರ
ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಪರಿಣಾಮ ಭಾರತದ ಬಹುತೇಕ ರಾಜ್ಯಗಳಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ.
ಸುಂಕ ಇಳಿಕೆಗೂ ಮುನ್ನ ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಂಡಿತ್ತು. ನಂತರ ಕೇಂದ್ರ ಸರ್ಕಾರ ತೆರಿಗೆ ತಗ್ಗಿಸಿದ ಬಳಿಕ ಸುಮಾರು 25 ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಕೆಯಾಗಿದೆ. ಆದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ಇಂಧನದ ಮೇಲಿನ ವ್ಯಾಟ್, ಸೆಸ್ ತಗ್ಗಿಸಲಾಗಿದೆ.
ಮೆಟ್ರೋ ನಗರಗಳಲ್ಲಿ ಇಂದು (ಡಿ.8) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ.
ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ನಂತರ ಚೇತರಿಸಿಕೊಂಡು 85 ಪ್ಲಸ್ ಡಾಲರ್ ಮೇಲಕ್ಕೇರಿತ್ತು. ಈಗ ಮತ್ತೆ 80ಡಾಲರ್ ಗಿಂತ ಕೆಳಗಿಳಿದಿದೆ ವಿವಿಧ ನಗರಗಳ ಬೆಲೆ ವಿವರ ಮುಂದಿದೆ..

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಸೆಂಬರ್ 08ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 75.09 ಯುಎಸ್ ಡಾಲರ್(1 USD=75.42 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ನಂತರ ಸರಾಸರಿ 80-85 ಪ್ಲಸ್ ಡಾಲರ್‌ನಂತೆ ಮುಂದುವರೆದಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ
ನವದೆಹಲಿ: ಪೆಟ್ರೋಲ್ 95.41ರೂ- ಡೀಸೆಲ್ 86.67 ರೂ
ಕೋಲ್ಕತಾ: ಪೆಟ್ರೋಲ್ 104.67 ರೂ- ಡೀಸೆಲ್ 89.79 ರೂ
ಮುಂಬೈ: ಪೆಟ್ರೋಲ್ 109.98 ರೂ- ಡೀಸೆಲ್ 94.14 ರೂ
ಚೆನ್ನೈ: ಪೆಟ್ರೋಲ್ 101.40 ರೂ- ಡೀಸೆಲ್ 91.43 ರೂ
ಬೆಂಗಳೂರು: ಪೆಟ್ರೋಲ್ 100.58 ರೂ- ಡೀಸೆಲ್ 85.01 ರೂ
ತಿರುವನಂತಪುರಂ: ಪೆಟ್ರೋಲ್ 106.36ರೂ- ಡೀಸೆಲ್ 93.47ರೂ
ಪಾಟ್ನಾ: ಪೆಟ್ರೋಲ್ 105.90 ರೂ- ಡೀಸೆಲ್ 91.09 ರೂ
ಹೈದರಾಬಾದ್: ಪೆಟ್ರೋಲ್ 108.20 ರೂ- ಡೀಸೆಲ್ 94.62 ರೂ
ನೋಯ್ಡಾ: ಪೆಟ್ರೋಲ್ 95.36 ರೂ- ಡೀಸೆಲ್ 86.87 ರೂ
ಜೈಪುರ: ಪೆಟ್ರೋಲ್ 106.82 ರೂ- ಡೀಸೆಲ್ 90.48ರೂ
(ಮಾಹಿತಿ ಕೃಪೆ: ಗುಡ್ ರಿಟರ್ನ್ಸ್ .ಇನ್)
Recommended Video

ವ್ಯಾಟ್, ಸೆಸ್ ಇಳಿಸಿರುವ ರಾಜ್ಯಗಳು
ಕೇಂದ್ರ ಸರ್ಕಾರ ನವೆಂಬರ್ 05ರಂದು ಪೆಟ್ರೋಲ್ ಬೆಲೆ 5 ರು ಹಾಗೂ ಡೀಸೆಲ್ ಬೆಲೆ 10 ರು ಪ್ರತಿ ಲೀಟರ್ ತಗ್ಗಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 111.31 ರೂ ನಷ್ಟಿದೆ, ಡೀಸೆಲ್ ಬೆಲೆ 94.54 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 107ರೂ ಗಡಿ ದಾಟಿದೆ.












Click it and Unblock the Notifications