ಜುಲೈ 04ರಂದು ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರದಲ್ಲಿ ಕೊಂಚ ಏರುಪೇರು
ನವದೆಹಲಿ, ಜುಲೈ 04: ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಅದಾಗ್ಯೂ, ಜುಲೈ 04ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಏರುಪೇರು ಆಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ.
ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿದೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಸಹ ಇಂಧನ ದರವನ್ನು ಇಳಿಸಿವೆ. ಜುಲೈ 4ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.28 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆ?
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.71 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.95 ರೂಪಾಯಿ ದಾಖಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 111.40 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ.
-
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ -
Adani Group: ಅದಾನಿ ನಾಯಕತ್ವದ ಮೇಲೆ ಜೈಪ್ರಕಾಶ್ ಗೌರ್ ಭರವಸೆ: ₹14,535 ಕೋಟಿಯ ಬೃಹತ್ ಡೀಲ್ಗೆ ಗ್ರೀನ್ ಸಿಗ್ನಲ್. -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications