ಮೇ 14ರಂದು ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ?

ನವದೆಹಲಿ, ಮೇ 14: ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.

ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಕಳೆದ ಒಂದು ತಿಂಗಳಿನಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದ್ದು, ಏಪ್ರಿಲ್ 30ರಂದು ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 38 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ 24 ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರ

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 120.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.77 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 115.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 99.83 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.65 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.71 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 111.60 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+