ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 21ರಂದು ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಏರುಪೇರು

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಅದಾಗ್ಯೂ, ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಇಲ್ಲದೇ ಸರ್ಕಾರಿ ತೈಲ ಕಂಪನಿಗಳು, ಪೆಟ್ರೋಲ್-ಡೀಸೆಲ್ ದರದಲ್ಲಿ ಪೈಸೆ ಲೆಕ್ಕದಲ್ಲಿ ಏರುಪೇರು ಆಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ. ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿದೆ.

ಕಚ್ಚಾ ತೈಲ; ಸೌದಿ ಅರೇಬಿಯಾಕ್ಕೆ ತಕ್ಕ ಪಾಠ ಕಲಿಸಲು ಮುಂದಾದ ಒಪೆಕ್ ರಾಷ್ಟ್ರಗಳು?
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಸಹ ಇಂಧನ ದರವನ್ನು ಇಳಿಸಿದ್ದವು. ಅದರಂತೆ ಅಕ್ಟೋಬರ್ 21ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

 ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆಯ

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 107.44 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.89 ರೂಪಾಯಿ ದಾಖಲಾಗಿದೆ.

 ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 106.31 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.27 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.

 ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

 ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 92.63 ಯುಎಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

English summary
Petrol and Diesel Price Today: Domestic Petrol and Diesel Price Unchanged on Friday (21st October ) in Many cities of across India. Latest Rates Here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X