ಡಿಸೆಂಬರ್ 24ರಂದು ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ?
ನವದೆಹಲಿ, ಡಿಸೆಂಬರ್ 24: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಇಳಿಕೆಯಾಗಿದೆ. ಅದಾಗ್ಯೂ, ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಇಲ್ಲದೇ ಸರ್ಕಾರಿ ತೈಲ ಕಂಪನಿಗಳು, ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ. ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿತ್ತು.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಸಹ ಇಂಧನ ದರವನ್ನು ಇಳಿಸಿದ್ದವು. ಅದಾಗಿ ಏಳು ತಿಂಗಳಿನಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಸ್ಥಿರತೆ ಕಂಡು ಬಂದಿದೆ. ಅದರಂತೆ ಡಿಸೆಂಬರ್ 24ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳೋಣ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರಗಳು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 106.31 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.27 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆ?
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.44 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.89 ರೂಪಾಯಿ ದಾಖಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 83.92 ಯುಎಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications