ಏ.11: ದೇಶದೆಲ್ಲೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಬೆಂಗಳೂರು, ಏಪ್ರಿಲ್ 11: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಾನುವಾರ (ಏಪ್ರಿಲ್ 11)ದಂದು ಯಾವುದೇ ಬದಲಾವಣೆಯಾಗಿಲ್ಲ. ಈ ಮೂಲಕ ಸತತ ಎರಡು ವಾರಗಳಿಂದ ಇಂಧನ ದರವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳು ಪರಿಷ್ಕರಿಸಲು ಹೋಗಿಲ್ಲ. ಕಳೆದ ವಾರ ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪ್ರತಿ ಲೀಟರ್ ಇಳಿಕೆಯಾಗಿತ್ತು.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 90.56ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 80.87ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.
ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.

ಈ ನಡುವೆ ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ ಎಂದು ಅಂಕಿ ಅಂಶ ತಿಳಿಸಿದೆ. ಡಿಸೆಂಬರ್ 2019ರ ನಂತರ ಭಾರಿ ಬೇಡಿಕೆ ಇದೀಗ ಕಂಡು ಬಂದಿದೆ. ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪೆಟ್ರೋಲ್ ಶೇ 27.4 ರಷ್ಟು ಅಧಿಕ ಮಾರಾಟ ಕಂಡು ಬಂದಿದೆ. ಇದೇ ವೇಳೆ ಡಿಸೇಲ್ ಬಳಕೆ ಶೇ 27.6ರಷ್ಟು ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 62.95 ಯುಎಸ್ ಡಾಲರ್( 1 USD=74.73ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.
ಪ್ರಮುಖ ನಗರಗಳಲ್ಲಿ ಏಪ್ರಿಲ್ 2ರಂದು ಇಂಧನ ದರ
ನಗರ - ಪೆಟ್ರೋಲ್- ಡೀಸೆಲ್
ದೆಹಲಿ: 90.56ರೂ- 80.87ರೂ
ಮುಂಬೈ: 96.98 ರೂ - 87.96 ರೂ
ಚೆನ್ನೈ: 92.58 ರೂ- 85.88 ರೂ
ಬೆಂಗಳೂರು: 93.65ರೂ - 85.81 ರೂ
ಕೋಲ್ಕತ್ತಾ: 90.77 ರೂ-83.75 ರೂ
ಹೈದರಾಬಾದ್: 94.16 ರು -88.20 ರು
ನೋಯ್ಡಾ: 88.91 ರೂ-81.33 ರೂ
ಪಾಟ್ನ: 92.89 ರು -86.12 ರು
ಲಕ್ನೋ: 88.85 ರು -81.27 ರು
ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications