• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅ.15: ಗ್ರಾಹಕರಿಗೆ ಶಾಕ್ ಮೇಲೆ ಶಾಕ್; ಇಂಧನ ದರ ಮತ್ತೆ ಹೆಚ್ಚಳ!

|
Google Oneindia Kannada News

ನವದೆಹಲಿ, ಅಕ್ಟೋಬರ್ 15: ವಿಜಯದಶಮಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿವೆ. ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ಎರಡು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.15, ಶುಕ್ರವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಸರ್ಕಾರಿ ತೈಲ ಕಂಪನಿಗಳಿಂದ ಕಳೆದ ಎರಡು ದಿನಗಳ ಬಳಿಕ ಇಂದು ಮತ್ತೆ ತೈಲ ದರ ಏರಿಕೆ ಕಂಡಿದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಏರಿಕೆ ಮಾಡಲಾಗಿದೆ. ಇದೇ ವೇಳೆ ಒಂದು ಲೀಟರ್ ಡೀಸೆಲ್ ದರ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

 ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆ

ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ 105.14 ರೂಪಾಯಿ ನಿಗದಿಯಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.87 ರೂಪಾಯಿಗೆ ಏರಿಕೆಯಾಗಿದೆ. ಉಳಿದಂತೆ ಭಾರತದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆಗೆ 34 ಪೈಸೆ ಹೆಚ್ಚಳದಿಂದ 111.09 ರೂ. ಆಗಿದ್ದರೆ, ಪ್ರತಿ ಲೀಟರ್ ಡೀಸೆಲ್ ದರವನ್ನು 37 ಪೈಸೆ ಹೆಚ್ಚಳದಿಂದ 101.78 ರೂ.ಗೆ ಏರಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 105.76 ಮತ್ತು 96.98 ರೂ. ಇದ್ದರೆ, ತಮಿಳುನಾಡಿನ ಕೋಲ್ಕತಾದಲ್ಲಿ ಲೀಟರ್‌ ಪೆಟ್ರೋಲ್ 102.40 ಮತ್ತು ಲೀಟರ್ ಡೀಸೆಲ್ 98.26 ರೂ. ಇದೆ.

 ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ಮತ್ತು ಪ್ರತಿ ಡೀಸೆಲ್ 99.63 ರೂ. ಇದ್ದರೆ, ತೆಲಂಗಾಣದ ಹೈದರಾಬಾದ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಈಗ 109.37 ಮತ್ತು ಡೀಸೆಲ್ ಬೆಲೆ 102.42 ರೂ.ಗೆ ಲಭ್ಯವಿದೆ. ಎರಡು ವಾರಗಳಲ್ಲಿ 14ನೇ ಬಾರಿ ಪೆಟ್ರೋಲ್ ಬೆಲೆಯನ್ನು ಏರಿಸಿದ್ದು. ಕಳೆದ ಮೂರು ವಾರಗಳಲ್ಲಿ 17 ಬಾರಿ ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ.

ತೈಲ ಕಂಪನಿಗಳು ಕಳೆದ ವಾರ ಆಟೋ ಇಂಧನ ಬೆಲೆಯನ್ನು ಹೆಚ್ಚಿಸಲು ಆರಂಭಿಸಿದವು. ಏಳು ದಿನಗಳ ಸತತ ಏರಿಕೆಯ ನಂತರ ಅಕ್ಟೋಬರ್ 12 ಮತ್ತು 13 ರಂದು ಬೆಲೆಗಳಲ್ಲಿ ಸ್ಥಿರತೆ ಕಾಪಾಡಿಕೊಂಡಿದ್ದವು. ದೇಶದ ಬಹುತೇಕ ಭಾಗಗಳಲ್ಲಿ ಲೀಟರ್‌ ಪೆಟ್ರೋಲ್ ಬೆಲೆ ಈಗಾಗಲೇ 100 ರೂ.ಗಿಂತ ಹೆಚ್ಚಿದ್ದರೆ, ಮಧ್ಯಪ್ರದೇಶ, ರಾಜಸ್ಥಾನ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಡ, ಬಿಹಾರ, ಕೇರಳ, ಕರ್ನಾಟಕ ಮತ್ತು ಲೇಹ್ ಸೇರಿದಂತೆ ಒಂದು ಡಜನ್ ರಾಜ್ಯಗಳಲ್ಲಿ ಡೀಸೆಲ್ ದರಗಳು 100 ರೂ. ದಾಟಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

   ಟೀಮ್ ಇಂಡಿಯಾ ಹೊಸ ಜರ್ಸಿ ಅನಾವರಣ:ನಿಮ್ಗೂ ಇದೆ ಧರಿಸೋ ಅವಕಾಶ | Oneindia Kannada
   English summary
   Petrol And Diesel Prices Were Hiked Again in all major cities today (October 15th).
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X