ಸೆ.29: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ; ಪ್ರಮುಖ ನಗರದಲ್ಲಿ ದರವೆಷ್ಟು?

ನವದೆಹಲಿ, ಸೆಪ್ಟೆಂಬರ್ 29: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ ನಂತರ ಇಂದು (ಸೆ. 29, ಬುಧವಾರ) ಯಾವುದೇ ಬದಲಾವಣೆ ಮಾಡದೆ ಸ್ಥಿರತೆ ಕಾಯ್ದುಕೊಂಡಿವೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.39 ರೂಪಾಯಿನಷ್ಟಿದ್ದು, ಡೀಸೆಲ್ ದರ ಲೀಟರ್‌ಗೆ 89.57 ರೂಪಾಯಿಗೆ ತಲುಪಿದೆ.

ಮಂಗಳವಾರ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಆರು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಂಡಿದ್ದ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿತ್ತು.

ವಾಣಿಜ್ಯ ನಗರಿ ಮುಂಬೈನಲ್ಲಿ ಇಂದು ಲೀಟರ್ ಪೆಟ್ರೋಲ್ ದರ 107.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.21 ರೂಪಾಯಿ ಇದೆ. ಇದೇ ವೇಳೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.87 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.62 ರೂಪಾಯಿ ಇದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂ.

ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್​ಗೆ 99.15 ರೂಪಾಯಿ ನಿಗದಿ ಆಗಿದ್ದರೆ, ಲೀಟರ್ ಡೀಸೆಲ್ ದರ 94.17 ರೂಪಾಯಿ ಇದೆ. ಇನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.06 ರೂಪಾಯಿ ಇದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.45 ರೂಪಾಯಿ ಇದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.98 ರೂಪಾಯಿ ಇದ್ದು, ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್​ಗೆ 97.61 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.31 ರೂಪಾಯಿ ನಿಗದಿ ಆಗಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಣೆ

ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಣೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

 ಏರಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್

ಏರಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್

ಕಳೆದ ಶುಕ್ರವಾರ ಲೀಟರ್ ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು. ಆ ಬಳಿಕ ಒಂದು ದಿನದ ನಂತರ ಭಾನುವಾರ ಮತ್ತೆ ಲೀಟರ್ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಮಂಗಳವಾರ ಸಹ ಡೀಸೆಲ್ ದರದಲ್ಲಿ 75 ಪೈಸೆ ಹೆಚ್ಚಳವಾಗಿತ್ತು. ಸತತ ಮೂರು ವಾರಗಳಿಂದ ಸ್ಥಿರತೆಯಲ್ಲಿದ್ದ ಪೆಟ್ರೋಲ್ ದರ ಸಹ ಮಂಗಳವಾರ ಮತ್ತೆ ಏರಿಕೆಯತ್ತ ಮುಖ ಮಾಡಿತ್ತು, ಆದರೆ ಇಂದು ಯಾವುದೇ ಬದಲಾವಣೆ ಆಗಿಲ್ಲ.

Recommended Video

      Ashwin ಹಾಗು Morgan ನಡುವೆ ಅಸಲಿಗೆ ನಡೆದಿದ್ದೇನು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+