ದೇಶದೆಲ್ಲೆಡೆ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ
ನವದೆಹಲಿ, ಸೆ. 15: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆಯಾದರೂ ಭಾರತದಲ್ಲಿ ಇಂದು (ಸೆ.15) ದಂದು ಇಂಧನ ದರ ಪರಿಷ್ಕರಿಸಲಾಗಿಲ್ಲ. ಕಳೆದ ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಕಳೆದ 10 ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಾಗಿಲ್ಲ.
ಸೆ.5 ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲಾಗಿತ್ತು, ಸರಾಸರಿ 18-19 ಪೈಸೆ ಪ್ರತಿ ಲೀಟರ್ ತಗ್ಗಿಸಲಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿದ್ದವು. ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಇನ್ನಷ್ಟು ಇಳಿಕೆಯಾಗಿದೆ.
ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಕಳೆದ 12 ದಿನಗಳಿಂದ ಚೇತರಿಸಿಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.
ಉಳಿದಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.
ದೆಹಲಿಯಲ್ಲಿ ದರ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.19ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 88.62ರು ಆಗಿದೆ. ದೇಶದ ವಿವಿಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 15ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 74.04ಯುಎಸ್ ಡಾಲರ್(1 USD=73.69ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ
ನವದೆಹಲಿ: ಪೆಟ್ರೋಲ್ 101.19ರೂ- ಡೀಸೆಲ್ 88.62ರೂ
ಕೋಲ್ಕತಾ: ಪೆಟ್ರೋಲ್ 101.62ರೂ- ಡೀಸೆಲ್ 91.71 ರೂ
ಮುಂಬೈ: ಪೆಟ್ರೋಲ್ 107.26ರೂ- ಡೀಸೆಲ್ 96.19ರೂ
ಚೆನ್ನೈ: ಪೆಟ್ರೋಲ್ 98.96ರೂ- ಡೀಸೆಲ್ 93.26 ರೂ
ಬೆಂಗಳೂರು: ಪೆಟ್ರೋಲ್ 104.70 ರೂ- ಡೀಸೆಲ್ 94.04ರೂ
ತಿರುವನಂತಪುರಂ: ಪೆಟ್ರೋಲ್ 103.42ರೂ- ಡೀಸೆಲ್ 95.38ರೂ
ಪಾಟ್ನಾ: ಪೆಟ್ರೋಲ್ 104.10ರೂ- ಡೀಸೆಲ್ 94.84ರೂ
ಹೈದರಾಬಾದ್: ಪೆಟ್ರೋಲ್ 105.26ರೂ- ಡೀಸೆಲ್ 96.69ರೂ
ನೋಯ್ಡಾ: ಪೆಟ್ರೋಲ್ 98.89ರೂ- ಡೀಸೆಲ್ 89.18ರೂ
ಜೈಪುರ: ಪೆಟ್ರೋಲ್ 108.22 ರೂ- ಡೀಸೆಲ್ 97.84ರೂ
(ಮಾಹಿತಿ ಕೃಪೆ: ಗುಡ್ ರಿಟರ್ನ್ಸ್ .ಇನ್)

ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ. ರಾಜಸ್ಥಾನದಲ್ಲಿ ಡೀಸೆಲ್ ಬೆಲೆ ಕೂಡಾ 100 ರು ಪ್ಲಸ್ ಇದೆ. ಚೆನ್ನೈ, ಗುರುಗ್ರಾಮ, ಚಂಡೀಗಢ, ನೋಯ್ಡಾ ಹಾಗೂ ಲಕ್ನೋದಲ್ಲಿ 100ರುಗಿಂತ ಕೆಳಗಿದೆ.

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.76ರೂ ನಷ್ಟಿದೆ, ಡೀಸೆಲ್ ಬೆಲೆ 102.02ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.
-
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications