ರಷ್ಯಾ ಉಕ್ರೇನ್ ಸಂಘರ್ಷ: ಕಚ್ಚಾತೈಲ ಬ್ಯಾರೆಲ್ ಬೆಲೆ 110 ಡಾಲರ್‌ಗೆ ಏರಿಕೆ
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡುತ್ತಿದ್ದಂತೆ ಬ್ರೆಂಟ್ ಕಚ್ಚಾತೈಲ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ. ಬುಧವಾರ ಬ್ಯಾರೆಲ್ ಬೆಲೆ 110 ಡಾಲರ್‌ಗೆ ಏರಿಕೆಯಾಗಿದೆ.
2014 ರ ಬಳಿಕ ಇದೇ ಮೊದಲ ಬಾರಿಗೆ ಕಚ್ಚಾ ತೈಲ ಬೆಲೆ ಈ ಮಟ್ಟಕ್ಕೆ ಹೆಚ್ಚಾಗಿದೆ.
ಅಮೆರಿಕ ಸೇರಿದಂತೆ ಅನೇಕ ದೇಶಗಳು ರಷ್ಯಾ ಮೇಲೆ ಸರಣಿ ನಿರ್ಬಂಧಗಳನ್ನು ಹೇರಿದ್ದು, ಆ ದೇಶದ ಆರ್ಥಿಕತೆ ಕುಸಿಯುವಂತೆ ಮಾಡುವುದಾಗಿ ಹೇಳಿವೆ. ಈ ಕ್ರಮಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿದೆ.
ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್ ಕ್ರಮಗಳಿಂದ ಜಾಗತಿಕ ಮಟ್ಟದಲ್ಲಿ ಹೊಡೆತಕ್ಕೆ ಒಳಗಾಗಿದ್ದ ಆರ್ಥಿಕ ಚಟುವಟಿಕೆಗಳು ಇದೀಗ ಪುನರಾರಂಭಗೊಳ್ಳುತ್ತಿದ್ದು, ತೈಲ ಬೆಲೆಯೂ ಹೆಚ್ಚಾಗುತ್ತಿದೆ. ಹೆಚ್ಚಿದ ಬೇಡಿಕೆ ಹಾಗೂ ಪೂರೈಕೆ ಸಮಸ್ಯೆಯಿಂದಾಗಿ ದರವೂ ಹೆಚ್ಚಳವಾಗುತ್ತಿದೆ. ಪೂರ್ವ ಯುರೋಪ್ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ದರ ಏರಿಕೆಗೆ ಕಾರಣವಾಗಿದೆ.

ರಷ್ಯಾ ಮೇಲೆ ಜಾಗತಿಕ ಮಟ್ಟದಲ್ಲಿ ಹೇರಲಾಗಿರುವ ಆರ್ಥಿಕ ನಿರ್ಬಂಧಗಳು, ಯುದ್ದದಿಂದಾಗಿ ವಿಶ್ವಮಟ್ಟದಲ್ಲಿ ಇಂಧನ ಪೂರೈಕೆ ಮೇಲೆ ಆಗಿರುವ ಪರಿಣಾಮಗಳೇ ದರ ಏರಿಕೆಗೆ ಕಾರಣ ಎನ್ನಲಾಗಿದೆ. ಅಮೆರಿಕ ಸೇರಿದಂತೆ ಅನೇಕ ದೇಶಗಳು ರಷ್ಯಾ ಮೇಲೆ ಸರಣಿ ನಿರ್ಬಂಧಗಳನ್ನು ಹೇರಿದ್ದು, ಆ ದೇಶದ ಆರ್ಥಿಕತೆ ಕುಸಿಯುವಂತೆ ಮಾಡುವುದಾಗಿ ಹೇಳಿವೆ.
ಈ ಕ್ರಮಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಛಿತತೆಯನ್ನು ಸೃಷ್ಟಿಸಿದೆ. ರಷ್ಯಾವು ವಿಶ್ವದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ಉತ್ಪಾದಕ ದೇಶವಾಗಿದೆ. ರಷ್ಯಾ ಮೇಲೆ ಹೇರಲಾಗಿರುವ ರಫ್ತು ನಿರ್ಬಂಧಗಳು ಆ ದೇಶದ ತೈಲ ಪೂರೈಕೆಗೆ ಅಡಚಣೆ ಉಂಟುಮಾಡಿದೆ ಈ ಹಿನ್ನೆಲೆಯಲ್ಲಿ ಪೂರೈಕೆ ಕಡಿಮೆಯಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ.
ತೈಲ ಸಚಿವಾಲಯದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶದ (PPAC) ಮಾಹಿತಿಯ ಪ್ರಕಾರ ಮಾರ್ಚ್ 1 ರಂದು ಭಾರತವು ಖರೀದಿಸುವ ಕಚ್ಚಾ ತೈಲದ ದರವು ಪ್ರತಿ ಬ್ಯಾರೆಲ್‌ಗೆ 102 ಡಾಲರ್‌ಗಿಂತ ಹೆಚ್ಚಿದೆ.
ತೈಲ ಮಾರುಕಟ್ಟೆ ಕಂಪನಿಗಳು ಸಾಮಾನ್ಯ ಲಾಭದ ಹಳಿಗೆ ಮರಳಲು ಚಿಲ್ಲರೆ ಮಾರಾಟದ ಬೆಲೆಗಳನ್ನು ಲೀಟರ್‌ಗೆ 9 ರೂ. ಅಥವಾ ಶೇ. 10ರಷ್ಟು ಏರಿಕೆ ಮಾಡಬೇಕು ಎಂದು ಬ್ರೋಕರೇಜ್ ಸಂಸ್ಥೆ ಹೇಳಿದೆ.
ಸಣ್ಣ ಅಬಕಾರಿ ಸುಂಕ ಕಡಿತ (ಪ್ರತಿ ಲೀಟರ್‌ಗೆ ರೂ 1-3) ಹಾಗೂ ಚಿಲ್ಲರೆ ಬೆಲೆಯಲ್ಲಿ ಸ್ವಲ್ಪ ಏರಿಕೆಯ (ಲೀಟರ್‌ಗೆ ರೂ 5-8) ಸಂಯೋಜನೆಯನ್ನು ನಾವು ನಿರೀಕ್ಷಿಸುತ್ತಿದ್ದು ಈ ಮೂಲಕ ಕಚ್ಚಾ ತೈಲ ದರ ಬ್ಯಾರೆಲ್‌ಗೆ 100 ಡಾಲರ್ ಮುಟ್ಟಿರುವುದನ್ನು ಸರಿ ಹೊಂದಿಸಬಹುದು ಎಂದು ವರದಿ ಲೆಕ್ಕಾಚಾರ ಹಾಕಿದೆ. ಆದರೆ ಸರಕಾರ ಅಬಕಾರಿ ಸುಂಕ ಕಡಿತ ಮಾಡಬಹುದೇ ಎಂಬ ಪ್ರಶ್ನೆ ಕಾಡುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications