ಪೆಟ್ರೋಲ್, ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆ, ಜನತೆ ಕಂಗಾಲು

ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಗುರುವಾರ (ಫೆ.23) ಮತ್ತೊಮ್ಮೆ ತೈಲ ದರ ಏರಿಕೆ ಮಾಡಿದ್ದು, ಸತತವಾಗಿ ಕೂಡಾ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ. ಸರಿ ಸುಮಾರು 30-35 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 25-30 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆಯಾಗಿ 90.83ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆ ಕಂಡು 81.32 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.63 ಪ್ರತಿ ಲೀಟರ್ ಹಾಗೂ ಡೀಸೆಲ್ 4.84 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 63 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.

ಬೆಲೆ ಏರಿಕೆಗೆ ಏನು ಕಾರಣ?

ಬೆಲೆ ಏರಿಕೆಗೆ ಏನು ಕಾರಣ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇದಲ್ಲದೆ, ಆಯಾ ರಾಜ್ಯಗಳಲ್ಲಿನ ವ್ಯಾಟ್, ಸೆಸ್ ದರ ಸೇರಿಸಿ ಇಂಧನ ದರ ಇನ್ನಷ್ಟು ಹೆಚ್ಚಳವಾಗುತ್ತದೆ.

ಇಂಧನ ದರ ಏರಿಕೆಗೆ ಅನೇಕ ಕಾರಣ

ಇಂಧನ ದರ ಏರಿಕೆಗೆ ಅನೇಕ ಕಾರಣ

ದಾಖಲೆ ಪ್ರಮಾಣದಲ್ಲಿ ಇಂಧನ ದರ ಏರಿಕೆಗೆ ಅನೇಕ ಕಾರಣಗಳಿದ್ದರೂ ಸದ್ಯಕ್ಕೆ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವೇ ಬೆಲೆ ಏರಿಕೆಗೆ ಕಾರಣ ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 62.95 ಯುಎಸ್ ಡಾಲರ್ ನಷ್ಟಾಗಿದೆ. ಇಂಧನ ಬೇಡಿಕೆ ಸುಧಾರಣೆಯ ನಿರೀಕ್ಷೆಯಲ್ಲಿ ತೈಲ ಸಂಸ್ಥೆಗಳು ಪೂರೈಕೆ ತಡೆ ಹಿಡಿದಿರುವುದು ಜಾಗತಿಕವಾಗಿ ತೈಲ ಬೆಲೆಯಲ್ಲಿ ಭಾರಿ ವ್ಯತ್ಯಾಸಕ್ಕೆ ಕಾರಣವಾಗಿದೆ.

ಇಂಧನ ಮೇಲಿನ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ

ಇಂಧನ ಮೇಲಿನ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ

ಈ ನಡುವೆ ಇಂಧನ ಮೇಲಿನ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿವೆ. ಕೆಲ ರಾಜ್ಯಗಳು ಮಾತ್ರ ತಮ್ಮ ಪಾಲಿನ ವ್ಯಾಟ್, ಸೆಸ್ ಕಡಿಮೆ ಮಾಡಿ ಜನತೆಗೆ ನೆಮ್ಮದಿ ಸುದ್ದಿ ನೀಡಿವೆ. ರಾಜ್ಯಗಳು ಹಾಕುವ ಸೆಸ್ ಕಡಿಮೆ ಮಾಡುವುದರಿಂದ ಕನಿಷ್ಠ 2 ರಿಂದ 5 ರು ತನಕವಾದರೂ ಪ್ರತಿ ಲೀಟರ್ ಮೇಲಿನ ಬೆಲೆ ಹೊರೆಯನ್ನು ತಗ್ಗಿಸಬಹುದಾಗಿದೆ. ಕೇಂದ್ರ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ. ದೆಹಲಿಯಲ್ಲಿ 19 ರು ಪ್ರತಿ ಲೀಟರ್ ವ್ಯಾಟ್, ಡೀಲರ್ ಕಮಿಷನ್ 3.67 ರು ಪ್ರತಿ ಲೀಟರ್ ಸೇರಿ ಬೆಲೆ ಇನ್ನಷ್ಟು ಏರಿಕೆಗೆ ಕಾರಣವಾಗಿದೆ.

ಕೆಲ ರಾಜ್ಯಗಳಲ್ಲಿ ಇಂಧನ ಮೇಲಿನ ಸುಂಕ ಇಳಿಕೆ

ಕೆಲ ರಾಜ್ಯಗಳಲ್ಲಿ ಇಂಧನ ಮೇಲಿನ ಸುಂಕ ಇಳಿಕೆ

ಕೆಲ ರಾಜ್ಯಗಳಲ್ಲಿ ಇಂಧನ ಮೇಲಿನ ಸುಂಕ ಇಳಿಕೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಅಸ್ಸಾಂ ,ಮೇಘಾಲಯ ಹಾಗೂ ನಾಗಾಲ್ಯಾಂಡ್ ನಲ್ಲಿ ವ್ಯಾಟ್, ಸೆಸ್ ಇಳಿಕೆ ಮಾಡಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ ಸತತವಾಗಿ 100 ರು ಗಡಿ ದಾಖಲೆ ಬರೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+