ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸತತ 21ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ

|
Google Oneindia Kannada News

ನವದೆಹಲಿ, ಜೂನ್ 27: ಸತತ 21ನೇ ದಿನ ಇಂಧನ ದರ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 80.38 ಮತ್ತು ಡೀಸೆಲ್ ದರ 80.40ಕ್ಕೆ ತಲುಪಿದೆ.

Recommended Video

ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು. | Andhra Pradesh | Oneindia Kannada

ದೇಶದಲ್ಲಿ ಲಾಕ್‌ಡೌನ್ ಜಾರಿಯಾಗುವ ಮೊದಲು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಕ್ರಮವಾಗಿ 69.60 ರೂ, 62.30 ರೂ.ಇತ್ತು. ಕೊವಿಡ್ 19 ಭೀತಿಯಿಂದಾಗಿ ಜಾರಿಯಲ್ಲಿದ್ದ ಲಾಕ್‌ಡೌನ್ ಸಡಿಲಗೊಂಡ ಬಳಿಕ ಜೂನ್ 7 ರಿಂದ ಇಂಧನ ದರ ಪರಿಷ್ಕರಣೆ ಆರಂಭಿಸಲಾಗಿದೆ.

ಅಂದಿನಿಂದ ತೈಲ ಬೆಲೆ ಏರುತ್ತಲೇ ಇದೆ. ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 25 ಪೈಸೆ ಮತ್ತು 21 ಪೈಸೆಯಷ್ಟು ಹೆಚ್ಚಳವಾಗಿದೆ.

Petrol

ಲಾಕ್‌ಡೌನ್‌ ನೀಡಿದ್ದ ಸಾರಿಗೆ ಇಲಾಖೆಯು ಸಾಕಷ್ಟು ನಷ್ಟವನ್ನು ಅನುಭವಿಸಿತ್ತು ಇದೀಗ ಡೀಸೆಲ್ ಬೆಲೆ ಏರಿಕೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಇದರಿಂದಾಗಿ ಸರಕು ಸಾಗಾಣಿಕೆ ವೆಚ್ಚ ಹೆಚ್ಚಳವಾದರೆ ಆಹಾರ ಪದಾರ್ಥಗಳ ಬೆಲೆಯೂ ದುಬಾರಿಯಾಗಲಿದೆ.

20ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ20ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ

ಇಂಧನ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಇಂಧನ ದರ ಏರಿಕೆ ನ್ಯಾಯಯುತವಲ್ಲ ಮತ್ತು ಚಿಂತನೆ ರಹಿತವಾದದ್ದು, ಕೇಂದ್ರ ಸರ್ಕಾರ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಕಚ್ಚಾ ತೈಲ ಬೆಲೆ ಇಳಿಕೆಯ ಲಾಭವನ್ನು ನೇರವಾಗಿ ನಾಗರಿಕರಿಗೆ ತಲುಪಿಸಬೇಕು ಎಂದು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 82.74 ರೂ ಇದೆ.

English summary
Fuel prices were hiked by the oil marketing companies for the 21st day in a row on Saturday.Petrol and diesel will now cost Rs 80.38/litre and Rs 80.40/litre respectively in the national capital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X