• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂನ್ 02 ರಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿಲ್ಲ!

|

ನವದೆಹಲಿ, ಜೂ.2: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಬುಧವಾರ (ಜೂನ್ 02)ದಂದು ಪರಿಷ್ಕರಣೆ ಮಾಡಿಲ್ಲ. ಆದರೆ, ಈ ತಿಂಗಳಲ್ಲಿ ಮೇ 4ರಿಂದ ಇಲ್ಲಿ ತನಕ ಒಟ್ಟಾರೆ 17ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ.

ಜೂನ್ 1 ರಂದು ಪೆಟ್ರೋಲ್ ಪ್ರತಿ ಲೀಟರ್ 26 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ 23 ಪೈಸೆ ಏರಿಕೆಯಾಗಿತ್ತು.

ದೆಹಲಿಯಲ್ಲಿ ದರ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 94.49ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 85.38ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 100.72ರು ಪ್ರತಿ ಲೀಟರ್, ಡೀಸೆಲ್ 92.69ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 105.43 ರು ನಷ್ಟಿದೆ, ಡೀಸೆಲ್ ಬೆಲೆ 98.24 ರು ಆಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 70.43 ಯುಎಸ್ ಡಾಲರ್(1 USD=73.07ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 94.49ರು- ಡೀಸೆಲ್ 85.38ರು
ಕೋಲ್ಕತಾ: ಪೆಟ್ರೋಲ್ 94.50ರು- ಡೀಸೆಲ್ 88.23ರು
ಮುಂಬೈ: ಪೆಟ್ರೋಲ್ 100.72ರು- ಡೀಸೆಲ್ 92.69ರು
ಚೆನ್ನೈ: ಪೆಟ್ರೋಲ್ 95.99ರು- ಡೀಸೆಲ್ 90.12ರು
ಬೆಂಗಳೂರು: ಪೆಟ್ರೋಲ್ 97.64ರು- ಡೀಸೆಲ್ 90.51ರು
ಪಾಟ್ನ: ಪೆಟ್ರೋಲ್ 96.80ರು- ಡೀಸೆಲ್ 90.81ರು
ಹೈದರಾಬಾದ್: ಪೆಟ್ರೋಲ್ 98.20ರು- ಡೀಸೆಲ್ 93.08ರು
ನೋಯ್ಡಾ: ಪೆಟ್ರೋಲ್ 92.01ರು- ಡೀಸೆಲ್ 85.96ರು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ. ಮೇ ತಿಂಗಳಲ್ಲಿ ಚುನಾವಣೆ ಬಳಿಕ ಸತತವಾಗಿ ಬೆಲೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ. ಅದರಂತೆ ಪೈಸೆ ಲೆಕ್ಕದಲ್ಲಿ ಹಂತ ಹಂತವಾಗಿ ದರ ಏರಿಕೆ ಕಂಡು ಬರುತ್ತಿದೆ.

English summary
Petrol Diesel Price Rate steady on Wednesday(June 02 ) across India. A litre of petrol now costs Rs 94.49, Diesel at Rs 85.38 per litre in Delhi. Check out prices of other Metro cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X