Get Updates
Get notified of breaking news, exclusive insights, and must-see stories!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಮುಂಬೈನಲ್ಲಿ ಪೆಟ್ರೋಲ್ 102 ರು

ನವದೆಹಲಿ, ಜೂ.11: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಜೂನ್ 11) ದಂದು ಪರಿಷ್ಕರಣೆ ಮಾಡಿಲ್ಲ. ಈ ತಿಂಗಳಲ್ಲಿ ಮೇ 4ರಿಂದ ಇಲ್ಲಿ ತನಕ ಒಟ್ಟಾರೆ 23ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ.

ಒಂದು ತಿಂಗಳಲ್ಲಿ ಪೆಟ್ರೋಲ್ 6ರು ಹಾಗೂ ಡೀಸೆಲ್ 7 ರು ಗೂ ಅಧಿಕ ಮೊತ್ತದಷ್ಟು ಏರಿಕೆಯಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು.

ಜೂನ್ 7 ರಂದು ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ ಸರಾಸರಿ 27-28 ಪೈಸೆ ಏರಿಕೆಯಾಗಿತ್ತು. ಆದರೆ, ಜೂನ್ 8 ದರ ಸ್ಥಿರವಾಗಿತ್ತು. ಜೂನ್ 9ರಂದು ಸರಾಸರಿ 23-25 ಪೈಸೆ ಏರಿಕೆಯಾಗಿತ್ತು. ಜೂನ್ 11ರಂದು ಪೆಟ್ರೋಲ್ ಬೆಲೆ 31 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ 28 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ.

ದೆಹಲಿಯಲ್ಲಿ ದರ ಶುಕ್ರವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 95.85ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 86.75ರು ಆಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.04ರು ಪ್ರತಿ ಲೀಟರ್, ಡೀಸೆಲ್ 94.15ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಲಡಾಕ್ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 106.94ರು ನಷ್ಟಿದೆ, ಡೀಸೆಲ್ ಬೆಲೆ 99.80ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 72.14ಯುಎಸ್ ಡಾಲರ್(1 USD=72.94ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 95.85ರು- ಡೀಸೆಲ್ 86.75ರು
ಕೋಲ್ಕತಾ: ಪೆಟ್ರೋಲ್ 95.80ರು- ಡೀಸೆಲ್ 89.60ರು
ಮುಂಬೈ: ಪೆಟ್ರೋಲ್ 102.04ರು- ಡೀಸೆಲ್ 94.15ರು
ಚೆನ್ನೈ: ಪೆಟ್ರೋಲ್ 97.19ರು- ಡೀಸೆಲ್ 91.42ರು
ಬೆಂಗಳೂರು: ಪೆಟ್ರೋಲ್ 99.05ರು- ಡೀಸೆಲ್ 91.97ರು
ತಿರುವನಂತಪುರಂ: ಪೆಟ್ರೋಲ್ 97.58ರು- ಡೀಸೆಲ್ 92.95ರು
ಪಾಟ್ನ: ಪೆಟ್ರೋಲ್ 98.74ರು- ಡೀಸೆಲ್ 92.80ರು
ಹೈದರಾಬಾದ್: ಪೆಟ್ರೋಲ್ 99.62ರು- ಡೀಸೆಲ್ 94.57ರು
ನೋಯ್ಡಾ: ಪೆಟ್ರೋಲ್ 93.06ರು- ಡೀಸೆಲ್ 87.11ರು
ಜೈಪುರ: ಪೆಟ್ರೋಲ್ 102.66ರು- ಡೀಸೆಲ್ 95.87ರು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿತ್ತು. 2021ರಲ್ಲಿ ಒಟ್ಟಾರೆ, ದೇಶದೆಲ್ಲೆಡೆ ಪೆಟ್ರೋಲ್ 11ರು ಹಾಗೂ ಡೀಸೆಲ್ 12 ರು ಏರಿಕೆಯಾಗಿದೆ.

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+