ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಜೂನ್ 12ರ ದರ ಎಷ್ಟಿದೆ?
ನವದೆಹಲಿ, ಜೂನ್ 12: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಶನಿವಾರ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿ ಮತ್ತೆ ಬೆಲೆ ಏರಿಕೆ ಮಾಡಿವೆ. ಈ ಮೂಲಕ ಮೇ 4ರಿಂದ ಸತತ 24ನೇ ಬಾರಿಗೆ ಇಂಧನ ಬೆಲೆ ಏರಿಕೆ ಮಾಡಲಾಗಿದೆ.
ಮೇ ತಿಂಗಳಿನಲ್ಲಿ ದೇಶದೆಲ್ಲೆಡೆ ಪೆಟ್ರೋಲ್ ಲೀಟರ್ಗೆ 16 ರೂಪಾಯಿ ಏರಿಕೆಯಾಗಿದ್ದರೆ, ಡೀಸೆಲ್ 18 ರೂ ಏರಿಕೆಯಾಗಿತ್ತು. ಇದೀಗ ಶನಿವಾರ ಪೆಟ್ರೋಲ್ ಲೀಟರ್ಗೆ 27 ಪೈಸೆ ಹಾಗೂ ಡೀಸೆಲ್ ಲೀಟರಿಗೆ 24 ಪೈಸೆ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 96.12 ರೂ ಇದ್ದರೆ, ಡೀಸೆಲ್ಗೆ 86.98 ರೂ ಆಗಿದೆ.
ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ದುಪ್ಪಟ್ಟಾಗಿದೆ. ಡೀಸೆಲ್ ತೆರಿಗೆ ಎಂಟು ಪಟ್ಟು ಹೆಚ್ಚಾಗಿದೆ. ರಾಜಸ್ಥಾನದಲ್ಲಿ ಅತಿ ಹೆಚ್ಚಿನ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಸದ್ಯಕ್ಕೆ ದೇಶದ ಆರು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಜೂನ್ 12ರಂದು ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟು ಏರಿಕೆಯಾಗಿದೆ? ಮುಂದೆ ಓದಿ...

ಜೂನ್ನಲ್ಲಿ ಎಷ್ಟು ಏರಿಕೆಯಾಗಿದೆ?
ಜೂನ್ 7 ರಂದು ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ ಸರಾಸರಿ 27-28 ಪೈಸೆ ಏರಿಕೆಯಾಗಿತ್ತು. ಜೂನ್ 8 ದರ ಸ್ಥಿರವಾಗಿತ್ತು. ಜೂನ್ 9ರಂದು ಸರಾಸರಿ 23-25 ಪೈಸೆ ಏರಿಕೆಯಾಗಿತ್ತು. ಜೂನ್ 11ರಂದು ಪೆಟ್ರೋಲ್ ಬೆಲೆ 31 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ 28 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲ್ ಲೀಟರ್ಗೆ 27 ಪೈಸೆ ಹಾಗೂ ಡೀಸೆಲ್ ಲೀಟರಿಗೆ 24 ಪೈಸೆ ಹೆಚ್ಚಳ ಮಾಡಲಾಗಿದೆ.

ಪ್ರಮುಖ ನಗರಗಳಲ್ಲಿ ತೈಲ ಬೆಲೆ
ನಗರ-ಇಂಧನ ದರ ಪ್ರತಿ ಲೀಟರ್ ರೂಗಳಲ್ಲಿ
ನವದೆಹಲಿ: ಪೆಟ್ರೋಲ್ 96.12 ರೂ- ಡೀಸೆಲ್ 86.98 ರೂ
ಕೋಲ್ಕತಾ: ಪೆಟ್ರೋಲ್ 96.06 ರೂ- ಡೀಸೆಲ್ 94.39 ರೂ
ಮುಂಬೈ: ಪೆಟ್ರೋಲ್ 102.30 ರೂ- ಡೀಸೆಲ್ 94.39 ರೂ
ಚೆನ್ನೈ: ಪೆಟ್ರೋಲ್ 97.43 ರೂ- ಡೀಸೆಲ್ 91.64 ರೂ
ಬೆಂಗಳೂರು: ಪೆಟ್ರೋಲ್ 99.33 ರೂ- ಡೀಸೆಲ್ 92.21ರೂ
ತಿರುವನಂತಪುರಂ: ಪೆಟ್ರೋಲ್ 97.83 ರೂ- ಡೀಸೆಲ್ 93.18 ರೂ
ಪಾಟ್ನಾ: ಪೆಟ್ರೋಲ್ 98.21 ರೂ- ಡೀಸೆಲ್ 92.29 ರೂ
ಹೈದರಾಬಾದ್: ಪೆಟ್ರೋಲ್ 99.90 ರೂ- ಡೀಸೆಲ್ 94.82 ರೂ
ನೋಯ್ಡಾ: ಪೆಟ್ರೋಲ್ 93.46 ರೂ- ಡೀಸೆಲ್ 87.46 ರೂ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 72.14ಯುಎಸ್ ಡಾಲರ್(1 USD=72.94ರು) ಪ್ರತಿ ಬ್ಯಾರೆಲ್ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
Recommended Video

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications