ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಜೂನ್27ರ ದರ ವಿವರ

ನವದೆಹಲಿ, ಜೂ. 27: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ರವಿವಾರ (ಜೂನ್ 25) ದಂದು ಪರಿಷ್ಕರಣೆ ಮಾಡಿವೆ. ಜೂನ್ 27 ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ 25 ಪೈಸೆ ಏರಿಕೆಯಾಗಿದೆ. ಮೇ 4ರಿಂದ ಇಂದಿನ ತನಕ ಒಟ್ಟು 31 ಬಾರಿ ಬೆಲೆ ಏರಿಕೆ ಮಾಡಲಾಗಿದೆ.

ಇಂದು ಇನ್ನೂ 4 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ. ಜೈಪುರ, ಭೋಪಾಲ್, ಮುಂಬೈ, ಹೈದರಾಬಾದ್ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ 100 ರು ಗಡಿ ದಾಟಿದೆ. ದೆಹಲಿಯಲ್ಲಿ ದರ ರವಿವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 98.46ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 88.90ರು ಆಗಿದೆ.

ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರುಗೂ ಅಧಿಕ ಏರಿಕೆಯಾಗಿತ್ತು. ಪೆಟ್ರೋಲ್ 7.71ರು ಹಾಗೂ ಡೀಸೆಲ್ 7.92ರು ನಷ್ಟು ಏರಿಕೆ ಕಂಡಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 104.56ರು ಪ್ರತಿ ಲೀಟರ್, ಡೀಸೆಲ್ 96.42ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಮೇ 29ರಂದು ಮೊದಲ ಬಾರಿಗೆ ಮುಂಬೈನಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಲಡಾಕ್, ಒಡಿಶಾ, ಮಣಿಪುರ ಹಾಗೂ ಮಹಾರಾಷ್ಟ್ರದ ಹಲವು ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 109.29ರು ನಷ್ಟಿದೆ, ಡೀಸೆಲ್ ಬೆಲೆ 101.77ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 76.18ಯುಎಸ್ ಡಾಲರ್(1 USD=74.51ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 98.46ರು- ಡೀಸೆಲ್ 88.90ರು
ಕೋಲ್ಕತಾ: ಪೆಟ್ರೋಲ್ 98.30ರು- ಡೀಸೆಲ್ 91.75ರು
ಮುಂಬೈ: ಪೆಟ್ರೋಲ್ 104.56ರು- ಡೀಸೆಲ್ 96.42ರು
ಚೆನ್ನೈ: ಪೆಟ್ರೋಲ್ 99.49ರು- ಡೀಸೆಲ್ 93.46ರು
ಬೆಂಗಳೂರು: ಪೆಟ್ರೋಲ್ 101.75ರು- ಡೀಸೆಲ್ 94.25ರು
ತಿರುವನಂತಪುರಂ: ಪೆಟ್ರೋಲ್ 100.44ರು- ಡೀಸೆಲ್ 95.44ರು
ಪಾಟ್ನ: ಪೆಟ್ರೋಲ್ 100.47ರು- ಡೀಸೆಲ್ 94.24ರು
ಹೈದರಾಬಾದ್: ಪೆಟ್ರೋಲ್ 102.32 ರು- ಡೀಸೆಲ್ 96.90ರು
ನೋಯ್ಡಾ: ಪೆಟ್ರೋಲ್ 95.60ರು- ಡೀಸೆಲ್ 89.26ರು
ಜೈಪುರ: ಪೆಟ್ರೋಲ್ 105.18 ರು- ಡೀಸೆಲ್ 97.99ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

    Virat Kohliಗೆ ಇಷ್ಟೊಂದು ಅವಮಾನ ಆಗ್ತಿರೋದು ಯಾಕೆ !! | Oneindia Kannada
    ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

    ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

    ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

    ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿತ್ತು. 2021ರಲ್ಲಿ ಒಟ್ಟಾರೆ, ದೇಶದೆಲ್ಲೆಡೆ ಪೆಟ್ರೋಲ್ 11ರು ಹಾಗೂ ಡೀಸೆಲ್ 12 ರು ಏರಿಕೆಯಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+