• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

|

ನವದೆಹಲಿ, ಮೇ 10: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಸೋಮವಾರ (ಮೇ 10) ಏರಿಕೆ ಮಾಡಿವೆ. ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು. ನಂತರ ಎರಡು ದಿನಗಳಿಂದ ದರ ಸ್ಥಿರವಾಗಿತ್ತು. ಈಗ ಸೋಮವಾರದಂದು ಮತ್ತೆ ಏರಿಕೆ ಹಾದಿ ಹಿಡಿಯಲಾಗಿದೆ.

ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 26 ಪೈಸೆ ಏರಿಕೆ ಕಂಡು 91.53ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 33 ಪೈಸೆ ಏರಿಕೆ ಕಂಡು 82.06ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 97.86ರು ಪ್ರತಿ ಲೀಟರ್, ಡೀಸೆಲ್ 89.17ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.

ಚುನಾವಣೆ ಬಳಿಕ ಪೆಟ್ರೋಲ್ ಬೆಲೆ 2 ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 3 ರು ಪ್ರತಿ ಲೀಟರ್ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಇತ್ತು. ಆದರೆ, ಈಗ ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ.

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ. ಮೇ ತಿಂಗಳಲ್ಲಿ ಚುನಾವಣೆ ಬಳಿಕ ಸತತವಾಗಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಈಗ ನಾಲ್ಕು ದಿನಗಳಿಂದ ಸರಾಸರಿ 20-30 ಪೈಸೆಯಷ್ಟು ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 68.64ಯುಎಸ್ ಡಾಲರ್(1 USD=73.34ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 91.53 ರು- ಡೀಸೆಲ್ 82.06ರು
ಬೆಂಗಳೂರು: ಪೆಟ್ರೋಲ್ 94.57ರು- ಡೀಸೆಲ್ 86.99ರು
ಮುಂಬೈ: ಪೆಟ್ರೋಲ್ 97.86 ರು- ಡೀಸೆಲ್ 89.17 ರು
ಚೆನ್ನೈ: ಪೆಟ್ರೋಲ್ 93.38 ರು- ಡೀಸೆಲ್ 86.96 ರು
ಪಾಟ್ನ: ಪೆಟ್ರೋಲ್ 94.11ರು- ಡೀಸೆಲ್ 87.59 ರು
ಕೋಲ್ಕತಾ: ಪೆಟ್ರೋಲ್ 91.66ರು- ಡೀಸೆಲ್ 84.90 ರು
ಹೈದರಾಬಾದ್: ಪೆಟ್ರೋಲ್ 95.13ರು- ಡೀಸೆಲ್ 89.47ರು
ನೋಯ್ಡಾ: ಪೆಟ್ರೋಲ್ 89.59ರು- ಡೀಸೆಲ್ 82.45ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Petrol Diesel Price Rate hiked on Monday (May 10) across India. A litre of petrol now costs Rs 91.53, Diesel at Rs 82.06per litre in Delhi. Check out prices of other Metro cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X