ಮೇ 13: ಪೆಟ್ರೋಲ್ ಬೆಲೆ ಸ್ಥಿರ, ವರ್ಷದಿಂದ ವರ್ಷಕ್ಕೆ ಹೋಲಿಕೆಯಲ್ಲಿ ಏರಿಕೆ

ನವದೆಹಲಿ, ಮೇ 13: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಗುರುವಾರ (ಮೇ 13) ಏರಿಕೆ ಮಾಡಿವೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಸತತ ಮೂರು ದಿನಗಳ ಕಾಲ ಏರಿಕೆ ಕಂಡ ಬಳಿಕ ಇಂದು ಸ್ಥಿರವಾಗಿದ್ದು, ಯಾವುದೇ ಏರಿಕೆ ಕಂಡು ಬಂದಿಲ್ಲ. ಆದರೆ, ವರ್ಷದಿಂದ ವರ್ಷಕ್ಕೆ ಹೋಲಿಕೆಯಲ್ಲಿ ಈ ತಿಂಗಳ ಲೆಕ್ಕದಲ್ಲಿ ಪೆಟ್ರೋಲ್ ಬೆಲೆ 20 ರು ಏರಿಕೆಯಾಗಿರುವುದು ಕಂಡು ಬಂದಿದೆ.

ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು. ನಂತರ ಎರಡು ದಿನಗಳಿಂದ ದರ ಸ್ಥಿರವಾಗಿತ್ತು. ಈಗ ಸತತವಾಗಿ ಮೂರನೇ ದಿನದಂದು ಮತ್ತೆ ಏರಿಕೆ ಹಾದಿ ಹಿಡಿಯಲಾಗಿತ್ತು. ನಂತರ ಬೆಲೆ ಸ್ಥಿರವಾಗಿದೆ.

ದೆಹಲಿಯಲ್ಲಿ ದರ ಗುರುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆ ಕಂಡು 92.05ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆಯಾಗಿ 82.61ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 98.36ರು(24 ಪೈಸೆ) ಪ್ರತಿ ಲೀಟರ್, ಡೀಸೆಲ್ 89.75ರು(27ಪೈಸೆ) ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಮತ್ತೊಮ್ಮೆ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ.

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 68.48ಯುಎಸ್ ಡಾಲರ್(1 USD=73.59ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 92.05ರು- ಡೀಸೆಲ್ 82.61ರು
ಕೋಲ್ಕತಾ: ಪೆಟ್ರೋಲ್ 92.16ರು- ಡೀಸೆಲ್ 85.45 ರು
ಮುಂಬೈ: ಪೆಟ್ರೋಲ್ 98.36ರು- ಡೀಸೆಲ್ 89. 75ರು
ಚೆನ್ನೈ: ಪೆಟ್ರೋಲ್ 93.84ರು- ಡೀಸೆಲ್ 87.49ರು
ಬೆಂಗಳೂರು: ಪೆಟ್ರೋಲ್ 95.11ರು- ಡೀಸೆಲ್ 87.57ರು
ಪಾಟ್ನ: ಪೆಟ್ರೋಲ್ 94.37ರು- ಡೀಸೆಲ್ 87.93 ರು
ಹೈದರಾಬಾದ್: ಪೆಟ್ರೋಲ್ 95.67ರು- ಡೀಸೆಲ್ 90.06ರು
ನೋಯ್ಡಾ: ಪೆಟ್ರೋಲ್ 89.90ರು- ಡೀಸೆಲ್ 82.90ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ. ಮೇ ತಿಂಗಳಲ್ಲಿ ಚುನಾವಣೆ ಬಳಿಕ ಸತತವಾಗಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಈಗ ನಾಲ್ಕು ದಿನಗಳಿಂದ ಸರಾಸರಿ 20-30 ಪೈಸೆಯಷ್ಟು ಏರಿಕೆ ಕಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+