ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 14: ಪೆಟ್ರೋಲ್ ಬೆಲೆ ಮತ್ತೆ ದಾಖಲೆ ಮಟ್ಟದಲ್ಲಿ ಏರಿಕೆ

|
Google Oneindia Kannada News

ನವದೆಹಲಿ, ಮೇ 14: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಮೇ 14) ಏರಿಕೆ ಮಾಡಿವೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಸತತ ಮೂರು ದಿನಗಳ ಕಾಲ ಏರಿಕೆ ಕಂಡ ಬಳಿಕ ನಿನ್ನೆ ಬೆಲೆ ಸ್ಥಿರವಾಗಿತ್ತು. ಯಾವುದೇ ಏರಿಕೆ ಕಂಡು ಬಂದಿಲ್ಲ. ಆದರೆ, ಮೇ 14ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 28-29ಪೈಸೆ ಹಾಗೂ ಡೀಸೆಲ್ ಸರಾಸರಿ 34-35 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ.

ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು. ನಂತರ ಎರಡು ದಿನಗಳಿಂದ ದರ ಸ್ಥಿರವಾಗಿತ್ತು. ಈಗ ಸತತವಾಗಿ ಮೂರನೇ ದಿನದಂದು ಮತ್ತೆ ಏರಿಕೆ ಹಾದಿ ಹಿಡಿಯಲಾಗಿತ್ತು. ನಂತರ ಬೆಲೆ ಸ್ಥಿರವಾಗಿದೆ.

ದೆಹಲಿಯಲ್ಲಿ ದರ ಗುರುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 92.24ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 82.95ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 98.65 ರು ಪ್ರತಿ ಲೀಟರ್, ಡೀಸೆಲ್ 90.11ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಮತ್ತೊಮ್ಮೆ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ.

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 68.78ಯುಎಸ್ ಡಾಲರ್(1 USD=73.44ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 92.34ರು- ಡೀಸೆಲ್ 82.95ರು
ಕೋಲ್ಕತಾ: ಪೆಟ್ರೋಲ್ 92.44ರು- ಡೀಸೆಲ್ 85.79 ರು
ಮುಂಬೈ: ಪೆಟ್ರೋಲ್ 98.65ರು- ಡೀಸೆಲ್ 90.11ರು
ಚೆನ್ನೈ: ಪೆಟ್ರೋಲ್ 94.19ರು- ಡೀಸೆಲ್ 87.90ರು
ಬೆಂಗಳೂರು: ಪೆಟ್ರೋಲ್ 95.41ರು- ಡೀಸೆಲ್ 87.94ರು
ಪಾಟ್ನ: ಪೆಟ್ರೋಲ್ 94.37ರು- ಡೀಸೆಲ್ 88.31 ರು
ಹೈದರಾಬಾದ್: ಪೆಟ್ರೋಲ್ 95.97ರು- ಡೀಸೆಲ್ 90.43ರು
ನೋಯ್ಡಾ: ಪೆಟ್ರೋಲ್ 90.12ರು- ಡೀಸೆಲ್ 83.24ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

ಭಾರತ ಮತ್ತು ಇಂಗ್ಲೆಂಡ್ ಸೇರಿ ಆಸ್ಟ್ರೇಲಿಯಾನ ಹಿಂದಿಕ್ಕಿದ್ದಾರೆ ! | Oneindia Kannada
ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ. ಮೇ ತಿಂಗಳಲ್ಲಿ ಚುನಾವಣೆ ಬಳಿಕ ಸತತವಾಗಿ ಬೆಲೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ. ಅದರಂತೆ ಪೈಸೆ ಲೆಕ್ಕದಲ್ಲಿ ಹಂತ ಹಂತವಾಗಿ ದರ ಏರಿಕೆ ಕಂಡು ಬರುತ್ತಿದೆ.

English summary
Petrol Diesel Price Rate hiked on Friday (May 14) across India. A litre of petrol now costs Rs 92.24, Diesel at Rs 82.95per litre in Delhi. Check out prices of other Metro cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X