ಕುಸಿತ ಕಂಡ ಕಚ್ಚಾತೈಲ ದರ, ಇನ್ನೊಂದು ವಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ, ಮಾರ್ಚ್ 9: ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ತೈಲ ಬೆಲೆ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. 1991ರ ಗಲ್ಫ್ ಯುದ್ಧದ ನಂತರ ಇದೇ ಮೊದಲ ಬಾರಿಗೆ ಕಚ್ಚಾತೈಲ ಬೆಲೆ ಅತ್ಯಂತ ಕಡಿಮೆ ಮೌಲ್ಯಕ್ಕೆ ಕುಸಿದಿದೆ.

Recommended Video

      Karnataka Budget 2020:Which comodity prices went up and down? | BSY | Oneindia Kannada

      ಕಚ್ಚಾ ತೈಲವನ್ನು ಅತಿ ದೊಡ್ಡ ಪ್ರಮಾಣದಲ್ಲಿ ಭಾರತ ಆಮದು ಮಾಡಿಕೊಳ್ಳುತ್ತಿದೆ. ಕಳೆದ 15 ದಿನದಲ್ಲಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ಎರಡು ರುಪಾಯಿಯಷ್ಟು ಇಳಿಕೆಯಾಗಿದೆ. ಸತತ ಐದು ದಿನಗಳ ಕಾಲ ತೈಲ ಬೆಲೆ ಇಳಿಕೆಯಾಗಿದೆ. ಇನ್ನೊಂದು ವಾರಗಳ ಕಾಲ ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಒಟ್ಟಾರೆ, ಈ ವರ್ಷದಲ್ಲಿ ಪೆಟ್ರೋಲ್ ಬೆಲೆ 4.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.7 ರು ಪ್ರತಿ ಲೀಟರ್ ನಂತೆ ಕಡಿಮೆಯಾಗಿದೆ.

      Petrol, diesel prices slashed, Check rate in your cities

      ಒಪೆಕ್ ರಾಷ್ಟ್ರಗಳ ಜೊತೆ ರಷ್ಯಾ ಜೊತೆಗಿನ ಮಾತುಕತೆ ವಿಫಲವಾಗಿದೆ. ಕೊರೊನಾ ವೈರಸ್ ಭೀತಿಯಿಂದ ತೈಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ತೈಲ ಉತ್ಪಾದನೆ ಹೆಚ್ಚಳಕ್ಕೆ ಸೌದಿ ಅರೇಬಿಯಾ ಮುಂದಾಗಿದೆ. 1991ರಲ್ಲಿ ಗಲ್ಫ್ ಯುದ್ಧದ ಸಂದರ್ಭದಲ್ಲಿ ಕಚ್ಚಾತೈಲ ಬೆಲೆ ಕುಸಿದಂತೆ ಶೇ 31ರಷ್ಟು ಇಳಿಕೆಯಾಗಿ ಪ್ರತಿ ಬ್ಯಾರೆಲ್ ಗೆ 31.02 ಡಾಲರ್ ನಷ್ಟಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 70.59 ಪ್ರತಿ ಲೀಟರ್(24 ಪೈಸೆ ಇಳಿಕೆ), ಡೀಸೆಲ್ ಬೆಲೆ 63.26 ರು ಪ್ರತಿ ಲೀಟರ್ (25 ಪೈಸೆ ಇಳಿಕೆ) ನಷ್ಟಿದೆ. ನಿಮ್ಮ ಊರಿನ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದರಗಳನ್ನು ತಿಳಿಯಲು ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+