ಮೇ ತಿಂಗಳಲ್ಲಿ 14ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ನವದೆಹಲಿ, ಮೇ 27: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಗುರುವಾರ (ಮೇ 27)ದಂದು ಪರಿಷ್ಕರಣೆ ಮಾಡಿವೆ. ಈ ತಿಂಗಳಲ್ಲಿ ಒಟ್ಟಾರೆ 14ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ.
ಮೇ 25ರಂದು ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 23ಪೈಸೆ ಹಾಗೂ ಡೀಸೆಲ್ ಸರಾಸರಿ 25ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ಇಂದು(ಮೇ 27) ಪೆಟ್ರೋಲ್ ಬೆಲೆ 24 ಪೈಸೆ ಹಾಗೂ ಡೀಸೆಲ್ ಬೆಲೆ 29 ಪೈಸೆ ಏರಿಕೆಯಾಗಿದೆ.
ದೆಹಲಿಯಲ್ಲಿ ದರ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 93.68ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 84.61ರು ಆಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಇಂಧನ ದರ 3.28 ರು ಏರಿಕೆ ಕಂಡಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 99.94ರು ಪ್ರತಿ ಲೀಟರ್, ಡೀಸೆಲ್ 91.87ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.
ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 104.42 ರು ನಷ್ಟಿದೆ, ಡೀಸೆಲ್ ಬೆಲೆ 97.18 ರು ಆಗಿದೆ.

ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಎಷ್ಟು
ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.
ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 68.36 ಯುಎಸ್ ಡಾಲರ್(1 USD=72.74ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ
ನವದೆಹಲಿ: ಪೆಟ್ರೋಲ್ 93.68ರು- ಡೀಸೆಲ್ 84.61ರು
ಕೋಲ್ಕತಾ: ಪೆಟ್ರೋಲ್ 93.72ರು- ಡೀಸೆಲ್ 87.46ರು
ಮುಂಬೈ: ಪೆಟ್ರೋಲ್ 99.94ರು- ಡೀಸೆಲ್ 91.87ರು
ಚೆನ್ನೈ: ಪೆಟ್ರೋಲ್ 95.28ರು- ಡೀಸೆಲ್ 89.39ರು
ಬೆಂಗಳೂರು: ಪೆಟ್ರೋಲ್ 96.80ರು- ಡೀಸೆಲ್ 89.70ರು
ಪಾಟ್ನ: ಪೆಟ್ರೋಲ್ 96.02ರು- ಡೀಸೆಲ್ 90.03 ರು
ಹೈದರಾಬಾದ್: ಪೆಟ್ರೋಲ್ 97.36ರು- ಡೀಸೆಲ್ 92.24ರು
ನೋಯ್ಡಾ: ಪೆಟ್ರೋಲ್ 91.39ರು- ಡೀಸೆಲ್ 85.19ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.












Click it and Unblock the Notifications