ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ
ಬೆಂಗಳೂರು, ಸೆಪ್ಟೆಂಬರ್ 13: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ.
ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 5 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ಗೆ 74.16 ರೂ., ಡೀಸೆಲ್ ದರ 67.36 ರೂ. ಆಗಿದೆ. ಕಳೆದ ಐದು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿದೆ.
ಪೆಟ್ರೋಲ್ ಬೆಲೆ ಏರಿಕೆಗೆ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಆಗುತ್ತಿರುವ ಏರಿಕೆಯೇ ಪ್ರಮುಖ ಕಾರಣವಾಗಿದೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್ನಲ್ಲಿ ಬ್ಯಾರೆಲ್ ತೈಲವು ರೂ. 3967.00 ಕ್ಕೆ ತಲುಪಿದೆ.

ಪೆಟ್ರೋಲ್-ಡೀಸೆಲ್ ದರ ಸ್ವಲ್ಪ ಹೆಚ್ಚಾಗಿದ್ದು, ನಿರೀಕ್ಷೆಯಂತೆ ವಾಹನ ಸವಾರರಿಗೆ ತೊಂದರೆ ಆರಂಭವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 71.76 ರೂ., ಡೀಸೆಲ್ ದರ 65.14 ರೂ. ಇದೆ.
ಚೆನ್ನೈನಲ್ಲಿ ಪೆಟ್ರೋಲ್ ದರ 74.56 ರೂ. ಮತ್ತು ಡೀಸೆಲ್ ದರ 68.84 ರೂ. ಆಗಿದೆ. ಅಲ್ಲದೇ ದೀದಿ ನಾಡು ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಪೆಟ್ರೋಲ್ ಲೀಟರ್‌ಗೆ 74.49 ರೂ. ಡೀಸೆಲ್ ಲೀಟರ್‌ಗೆ 67.55 ರೂ. ಇದೆ. ಹಾಗೆಯೇ ಮುಂಬೈನಲ್ಲಿ ಪೆಟ್ರೋಲ್ ದರ 77.45 ರೂ., ಡೀಸೆಲ್ ದರ 68.32 ರೂ. ಇದೆ.
ಇತ್ತೀಚೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಲ್ಲದ ಕಾರಣ ಕೊಂಚ ನಿರಾಳವಾಗಿದ್ದ ವಾಹನ ಸವಾರರಿಗೆ ಕಹಿಸುದ್ದಿ ಸಿಕ್ಕಿತ್ತು. ಮೂರು ತಿಂಗಳ ಮುನ್ನ ಬೆಲೆ ಏರಿಕೆಗೆ ತತ್ತರಿಸಿ ಹೋಗಿದ್ದ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು.
ಈ ಆಮದು ಮೇಲಿನ ನಿರ್ಬಂಧ ಹೇರಿದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 5 ರಿಂದ 10 ರೂ.ವರೆಗೆ ಏರಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ಇಂಧನ ದರದಲ್ಲಿ ಭಾರೀ ಏರಿಕೆಯಾಗಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಲೀಟರ್‌ಗೆ 5 ರೂ.ನಿಂದ 10 ರೂ. ಏರಿಕೆಯಾಗಬಹುದು ಎಂದು ಹೇಳಲಾಗುತ್ತಿತ್ತು.
ಇರಾನ್ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ನೀಡಿದ್ದ ವಿನಾಯಿತಿ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಇದು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಕಾರಣವಾಗಿದೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications