ಕಚ್ಚಾತೈಲ ಬೆಲೆ ಕುಸಿತ; ಸತತ 19 ದಿನಗಳಿಂದ ಇಂಧನ ದರ ಏರಿಕೆ ಇಲ್ಲ!

ನವದೆಹಲಿ, ಆಗಸ್ಟ್ 5: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ಏರಿಕೆಯಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 19 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 5ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ದೆಹಲಿಯಲ್ಲಿ ದರ ಬುಧವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.84ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.87ರು ಆಗಿದೆ. ದೇಶದ ವಿವಿಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

 ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 70.59ಯುಎಸ್ ಡಾಲರ್(1 USD=74.24ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ

ನವದೆಹಲಿ: ಪೆಟ್ರೋಲ್ 101.84 ರೂ- ಡೀಸೆಲ್ 89.87ರೂ
ಕೋಲ್ಕತಾ: ಪೆಟ್ರೋಲ್ 102.08 ರೂ- ಡೀಸೆಲ್ 93.02 ರೂ
ಮುಂಬೈ: ಪೆಟ್ರೋಲ್ 107.83 ರೂ- ಡೀಸೆಲ್ 97.45 ರೂ
ಚೆನ್ನೈ: ಪೆಟ್ರೋಲ್ 102.49 ರೂ- ಡೀಸೆಲ್ 94.39 ರೂ
ಬೆಂಗಳೂರು: ಪೆಟ್ರೋಲ್ 105.25 ರೂ- ಡೀಸೆಲ್ 95.26 ರೂ
ತಿರುವನಂತಪುರಂ: ಪೆಟ್ರೋಲ್ 103.82 ರೂ- ಡೀಸೆಲ್ 96.47 ರೂ
ಪಾಟ್ನಾ: ಪೆಟ್ರೋಲ್ 104.39 ರೂ- ಡೀಸೆಲ್ 95.64ರ ರೂ
ಹೈದರಾಬಾದ್: ಪೆಟ್ರೋಲ್ 105.83 ರೂ- ಡೀಸೆಲ್ 97.96 ರೂ
ನೋಯ್ಡಾ: ಪೆಟ್ರೋಲ್ 98.90 ರೂ- ಡೀಸೆಲ್ 90.23 ರೂ
ಜೈಪುರ: ಪೆಟ್ರೋಲ್ 108.85 ರೂ- ಡೀಸೆಲ್ 99.14 ರೂ
(ಮಾಹಿತಿಕೃಪೆ: ಗುಡ್ ರಿಟರ್ನ್ಸ್ .ಇನ್)

 ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು

ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ.

 ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು

ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರೂ ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+