ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿನ ಪೆಟ್ರೋಲ್ ದರ ವಿವರ

ನವದೆಹಲಿ, ಜುಲೈ 11: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಗುರುವಾರ (ಜುಲೈ 11) ದಂದು ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಲಾಗಿಲ್ಲ. ದೇಶದ ಎಲ್ಲಾ ಮೆಟ್ರೋ ನಗರಗಳು ಸೇರಿದಂತೆ 18 ರಾಜ್ಯಗಳಲ್ಲಿ ಪೆಟ್ರೋಲ್ ದರ ಸೆಂಚುರಿ ಪ್ಲಸ್ ದರ ಹೊಂದಿವೆ.

ಮೇ 4ರಿಂದ ಇಂದಿನ ತನಕ ಒಟ್ಟು 38 ಬಾರಿ ಹಾಗೂ ಜೂನ್ ತಿಂಗಳಲ್ಲೇ 19 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 10ರಂದು ಪೆಟ್ರೋಲ್ ಬೆಲೆ ಸರಾಸರಿ 35 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿತ್ತು. ರವಿವಾರ(ಜುಲೈ 11)ರಂದು ಬೆಲೆ ಏರಿಕೆಯಾಗಿಲ್ಲ.

ದೆಹಲಿಯಲ್ಲಿ ದರ ರವಿವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 100.95ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.92ರು ಆಗಿದೆ. ದೇಶದ ವಿವಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 106.97ರು ಪ್ರತಿ ಲೀಟರ್, ಡೀಸೆಲ್ 97.5ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಮೇ 29ರಂದು ಮೊದಲ ಬಾರಿಗೆ ಮುಂಬೈನಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಲಡಾಕ್, ಒಡಿಶಾ, ಮಣಿಪುರ, ಸಿಕ್ಕಿಂ ಹಾಗೂ ಮಹಾರಾಷ್ಟ್ರದ ಹಲವು ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 111.83ರು ನಷ್ಟಿದೆ, ಡೀಸೆಲ್ ಬೆಲೆ 102.78ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 75.55ಯುಎಸ್ ಡಾಲರ್(1 USD=74.49ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 100.95ರು- ಡೀಸೆಲ್ 89.88ರು
ಕೋಲ್ಕತಾ: ಪೆಟ್ರೋಲ್ 101.01ರು- ಡೀಸೆಲ್ 92.97ರು
ಮುಂಬೈ: ಪೆಟ್ರೋಲ್ 106.93ರು- ಡೀಸೆಲ್ 97.46ರು
ಚೆನ್ನೈ: ಪೆಟ್ರೋಲ್ 101.67ರು- ಡೀಸೆಲ್ 94.39ರು
ಬೆಂಗಳೂರು: ಪೆಟ್ರೋಲ್ 104.29ರು- ಡೀಸೆಲ್ 95.26ರು
ತಿರುವನಂತಪುರಂ: ಪೆಟ್ರೋಲ್ 103.14ರು- ಡೀಸೆಲ್ 96.70ರು
ಪಾಟ್ನ: ಪೆಟ್ರೋಲ್ 103.50ರು- ಡೀಸೆಲ್ 95.76ರು
ಹೈದರಾಬಾದ್: ಪೆಟ್ರೋಲ್ 104.86ರು- ಡೀಸೆಲ್ 97.96ರು
ನೋಯ್ಡಾ: ಪೆಟ್ರೋಲ್ 98.24ರು- ಡೀಸೆಲ್ 90.46ರು
ಜೈಪುರ: ಪೆಟ್ರೋಲ್ 107.60ರು- ಡೀಸೆಲ್ 98.89ರು

Recommended Video

    2 ಸಾವಿರ ರಸ್ತೆ ಗುಂಡಿ ಮುಚ್ಚಿದ ವೃದ್ಧ ದಂಪತಿಗೆ ಸೆಲ್ಯೂಟ್ | Oneindia Kannada
    ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

    ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

    ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+