ಜುಲೈ 22: ದೇಶದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಇಲ್ಲ
ನವದೆಹಲಿ, ಜುಲೈ 21: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಗುರುವಾರ (ಜುಲೈ 22) ದಂದು ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ಕಳೆದ ಐದು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಆದರೂ, ದೇಶದಲ್ಲಿ 19ಕ್ಕೂ ಅಧಿಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ಪ್ಲಸ್ ರು ನಷ್ಟಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ.
ದೆಹಲಿಯಲ್ಲಿ ದರ ಗುರುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.84ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.87ರು ಆಗಿದೆ. ದೇಶದ ವಿವಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ರಾಜಸ್ಥಾನದಲ್ಲಿ ಹೆಚ್ಚು ವ್ಯಾಟ್, ಸೆಸ್
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83ರು ಪ್ರತಿ ಲೀಟರ್, ಡೀಸೆಲ್ 97.45ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಮೇ 29ರಂದು ಮೊದಲ ಬಾರಿಗೆ ಮುಂಬೈನಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲೇ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 71.88 ಯುಎಸ್ ಡಾಲರ್(1 USD=74.47ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ
ನವದೆಹಲಿ: ಪೆಟ್ರೋಲ್ 101.84ರು- ಡೀಸೆಲ್ 89.87ರು
ಕೋಲ್ಕತಾ: ಪೆಟ್ರೋಲ್ 102.08ರು- ಡೀಸೆಲ್ 93.02ರು
ಮುಂಬೈ: ಪೆಟ್ರೋಲ್ 107.83ರು- ಡೀಸೆಲ್ 97.45ರು
ಚೆನ್ನೈ: ಪೆಟ್ರೋಲ್ 102.49ರು- ಡೀಸೆಲ್ 94.39ರು
ಬೆಂಗಳೂರು: ಪೆಟ್ರೋಲ್ 105.25ರು- ಡೀಸೆಲ್ 95.26ರು
ತಿರುವನಂತಪುರಂ: ಪೆಟ್ರೋಲ್ 103.82ರು- ಡೀಸೆಲ್ 96.47ರು
ಪಾಟ್ನ: ಪೆಟ್ರೋಲ್ 104.39ರು- ಡೀಸೆಲ್ 95.64ರು
ಹೈದರಾಬಾದ್: ಪೆಟ್ರೋಲ್ 105.83ರು- ಡೀಸೆಲ್ 97.96ರು
ನೋಯ್ಡಾ: ಪೆಟ್ರೋಲ್ 98.90ರು- ಡೀಸೆಲ್ 90.23ರು
ಜೈಪುರ: ಪೆಟ್ರೋಲ್ 108.85ರು- ಡೀಸೆಲ್ 99.14ರು
(ಮಾಹಿತಿ ಕೃಪೆ: ಗುಡ್‌ರಿಟರ್ನ್ಸ್.ಇನ್)

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications