ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 21ರಂದು ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

|
Google Oneindia Kannada News

ನವದೆಹಲಿ, ಮೇ 21: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಮೇ 21)ದಂದು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ ಒಟ್ಟಾರೆ 11ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 21ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 19ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ದರ ಪರಿಷ್ಕರಣೆ ಮಾಡಿರಲಿಲ್ಲ.

ದೆಹಲಿಯಲ್ಲಿ ದರ ಶುಕ್ರವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 93.04ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 83.80ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 99.32 ರು ಪ್ರತಿ ಲೀಟರ್, ಡೀಸೆಲ್ 91.01ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.

ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 104 ರು ನಷ್ಟಿದೆ, ಡೀಸೆಲ್ ಬೆಲೆ 96.62 ರು ಆಗಿದೆ.

ಲೆಕ್ಕಾಚಾರದಲ್ಲಿ

ಲೆಕ್ಕಾಚಾರದಲ್ಲಿ

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಕುಸಿತ ಕಂಡು 65.27ಯುಎಸ್ ಡಾಲರ್(1 USD=72.97ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನವದೆಹಲಿ: ಪೆಟ್ರೋಲ್ 93.04ರು- ಡೀಸೆಲ್ 83.80ರು
ಕೋಲ್ಕತಾ: ಪೆಟ್ರೋಲ್ 93.11ರು- ಡೀಸೆಲ್ 86.64 ರು
ಮುಂಬೈ: ಪೆಟ್ರೋಲ್ 99.32ರು- ಡೀಸೆಲ್ 91.01ರು
ಚೆನ್ನೈ: ಪೆಟ್ರೋಲ್ 94.71ರು- ಡೀಸೆಲ್ 88.62ರು
ಬೆಂಗಳೂರು: ಪೆಟ್ರೋಲ್ 96.14ರು- ಡೀಸೆಲ್ 88.84ರು
ಪಾಟ್ನ: ಪೆಟ್ರೋಲ್ 95.41ರು- ಡೀಸೆಲ್ 89.21 ರು
ಹೈದರಾಬಾದ್: ಪೆಟ್ರೋಲ್ 96.70ರು- ಡೀಸೆಲ್ 91.36ರು
ನೋಯ್ಡಾ: ಪೆಟ್ರೋಲ್ 90.61ರು- ಡೀಸೆಲ್ 84.04ರು

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ. ಮೇ ತಿಂಗಳಲ್ಲಿ ಚುನಾವಣೆ ಬಳಿಕ ಸತತವಾಗಿ ಬೆಲೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ. ಅದರಂತೆ ಪೈಸೆ ಲೆಕ್ಕದಲ್ಲಿ ಹಂತ ಹಂತವಾಗಿ ದರ ಏರಿಕೆ ಕಂಡು ಬರುತ್ತಿದೆ.

English summary
Petrol Diesel Price Rate unchanged on Friday (May 21) across India. A litre of petrol now costs Rs 93.04, Diesel at Rs 83.80 per litre in Delhi. Check out prices of other Metro cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X