ಮೂರು ದಿನಗಳ ವಿರಾಮದ ಬಳಿಕ ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ
ನವದೆಹಲಿ, ಜನವರಿ 18: ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಮಾಡಿವೆ. ಮೂರು ದಿನಗಳ ವಿರಾಮದ ಬಳಿಕ ತೈಲ ದರ ಏರಿಕೆಯಾಗಿದೆ. ಸೋಮವಾರ ನವದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 25 ಪೈಸೆ ಏರಿಕೆಗೊಂಡು 84.95 ರೂಪಾಯಿಗೆ ತಲುಪಿದೆ. ಇನ್ನೂ ಡೀಸೆಲ್ ದರವು ಲೀಟರ್ಗೆ 25 ಪೈಸೆ ಹೆಚ್ಚಾಗಿ 75.13 ರೂಪಾಯಿ ಮುಟ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿದೆ:
ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 84.95 ರೂಪಾಯಿ, 1 ಲೀಟರ್ ಡೀಸಸೆಲ್ ಬೆಲೆ ಪ್ರತಿ ಲೀಟರ್ಗೆ 75.13 ರೂಪಾಯಿ
ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 86.39 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 78.72 ರೂಪಾಯಿ
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 91.56 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 81.87 ರೂಪಾಯಿ
ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 87.82 ರೂಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 79.67 ರೂಪಾಯಿ
ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87.64 ರೂಪಾಯಿ, ಅದೇ ಸಮಯದಲ್ಲಿ 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 80.44 ರೂಪಾಯಿ