ಪೆಟ್ರೋಲ್, ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ

Posted By:
Subscribe to Oneindia Kannada

ನವದೆಹಲಿ, ಅಕ್ಟೋಬರ್ 04: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಂಗಳಿಗೆ ಎರಡು ಬಾರಿ ಇಂಧನ ದರ ಏರಿಕೆ-ಇಳಿಕೆ ಮಾಡುವುದು ಎಲ್ಲರಿಗೂ ತಿಳಿದಿರಬಹುದು. ಪೆಟ್ರೋಲ್ ಬೆಲೆ ಅಲ್ಪಪ್ರಮಾಣದಲ್ಲಿ ಏರಿಕೆಯಾಗಿ ನಾಲ್ಕು ದಿನಗಳು ಕಳೆಯುವಷ್ಟರಲ್ಲಿ ಮತ್ತೊಮ್ಮೆ ಪೆಟ್ರೋಲ್ ದರ ಪೈಸೆ ಲೆಕ್ಕದಲ್ಲಿ ಏರಿಕೆಯಾಗಿದೆ.

ಮಂಗಳವಾರ(ಅಕ್ಟೋಬರ್ 04) ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ದರವನ್ನು ಅಲ್ಪಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ.[ಸಿದ್ದರಾಮಯ್ಯ ಅವ್ರೇ, ಪೆಟ್ರೋಲ್ ಮೇಲೆ ವ್ಯಾಟ್ ಇಳಿಕೆ ಮಾಡ್ರಿ]

Petrol Diesel rate per Litre price hiked

ಪೆಟ್ರೋಲ್ ದರ ಪ್ರತಿ ಲೀಟರ್ ಗೆ 14 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 10 ಪೈಸೆ ಏರಿಕೆಯಾಗಿದೆ. ಡೀಲರ್ ಗಳಿಗೆ ನೀಡುವ ಕಮಿಷನ್ ದರ ಏರಿಕೆಯಾದ ಹಿನ್ನಲೆಯಲ್ಲಿ ಇಂಧನ ಬೆಲೆ ಏರಿಕೆ ಅನಿವಾರ್ಯ ಎನ್ನಲಾಗಿದೆ.

ಈ ಪರಿಷ್ಕೃತ ದರದಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 69.35 ರು (ಈ ಮುಂಚೆ 69.21 ರು) ಆಗಲಿದೆ ಮತ್ತು ಡೀಸೆಲ್ ದರ ಪ್ರತಿ ಲೀಟರಿಗೆ 57.01 ರು (56.91 ರು) ಆಗಲಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.(ಒನ್ ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Petrol price on Tuesday hiked by 14 paise per litre while diesel rate was also hiked by 10 paise per litre (excluding state levies). Revised rates will take effect from midnight (October 04).
Please Wait while comments are loading...