ಪೆಟ್ರೋಲ್, ಡೀಸೆಲ್ ದರ ಇಳಿಕೆ: ಮಾ.26ರ ಇಂಧನ ದರದ ಪಟ್ಟಿ
ನವದೆಹಲಿ, ಮಾರ್ಚ್ 26: ಭಾರತದಲ್ಲಿ 24 ದಿನಗಳಿಂದಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ಸ್ಥಿರತೆ ಕಾಯ್ದುಕೊಂಡು ಬಂದ ಇಂಧನ ಮಾರುಕಟ್ಟೆ ಕಂಪನಿಗಳು ವಾಹನ ಸವಾರರಿಗೆ ಸಿಹಿಸುದ್ದಿ ನೀಡಿವೆ. 2021ನೇ ವರ್ಷದಲ್ಲಿ ಎರಡನೇ ಬಾರಿ ಇಂಧನ ಬೆಲೆಯಲ್ಲಿ ಇಳಿಕೆಯಾಗಿದೆ.
ಎರಡು ದಿನಗಳ ನಿರಂತರ ಇಳಿಕೆ ಬಳಿಕ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ದರದಲ್ಲಿ ಸ್ಥಿರತೆ ಕಂಡು ಬಂದಿದೆ. ಈ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ.ಗೆ 39 ಪೈಸೆ ಮತ್ತು ಡೀಸೆಲ್ ಪ್ರತಿ ಲೀ.ಗೆ 37 ಪೈಸೆ ಇಳಿಕೆಯಾಗಿದೆ.
ಭಾರತದಲ್ಲಿ ಪಂಚರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಈ ಹಿನ್ನೆಲೆ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಯು ಇಳಿಮುಖವಾಗಿದೆ ಎಂದು ತಿಳಿದು ಬಂದಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ:
ನಗರ - ಪೆಟ್ರೋಲ್ ದರ(ಪ್ರತಿ ಲೀ.ಗೆ) - ಡೀಸೆಲ್ ದರ(ಪ್ರತಿ ಲೀ.ಗೆ)
ನವದೆಹಲಿ - 90.78 - 81.10
ಮುಂಬೈ - 97.19 - 88.20
ಕೋಲ್ಕತ್ತಾ - 90.98 - 83.98
ಚೆನ್ನೈ - 92.77 - 86.10












Click it and Unblock the Notifications