ಗಮನಿಸಿ: 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ, ಮೇ 4: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಂಗಳವಾರ ( ಮೇ 4) ಏರಿಕೆ ಮಾಡಿವೆ. ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.

ಪೆಟ್ರೋಲ್ ಪ್ರತಿ ಲೀಟರ್ ಮೇಲೆ 15ಪೈಸೆ ಹಾಗೂ ಡೀಸೆಲ್ 18ಪೈಸೆ ಪ್ರತಿ ಲೀಟರ್ ಏರಿಕೆ ಕಂಡಿದೆ. ದೆಹಲಿಯಲ್ಲಿ ದರ ಪರಿಷ್ಕರಣೆ ಬಳಿಕ ಪೆಟ್ರೋಲ್ ಪ್ರತಿ ಲೀಟರ್ 90.55 ರು ಹಾಗೂ ಡೀಸೆಲ್ ಪ್ರತಿ ಲೀಟರ್ 80.91ರು ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 96.95ರು ಪ್ರತಿ ಲೀಟರ್ ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.

ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬಳಿಕ ಪೆಟ್ರೋಲ್ ಬೆಲೆ 2ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 3 ರು ಪ್ರತಿ ಲೀಟರ್ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಇತ್ತು. ಆದರೆ, ಈಗ ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ.

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಏಪ್ರಿಲ್ ತಿಂಗಳಲ್ಲಿ ಎಷ್ಟು ಪ್ರಮಾಣದಲ್ಲಿ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ.

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 67.58ಯುಎಸ್ ಡಾಲರ್(1 USD=73.92ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ

ಬೆಂಗಳೂರು: ಪೆಟ್ರೋಲ್ 93.60 ರು- ಡೀಸೆಲ್ 85.81 ರು
ಚೆನ್ನೈ: ಪೆಟ್ರೋಲ್ 92.55 ರು- ಡೀಸೆಲ್ 85.90 ರು
ಪುಣೆ: ಪೆಟ್ರೋಲ್ 96.60 ರು- ಡೀಸೆಲ್ 86.30 ರು
ಕೋಲ್ಕತಾ: ಪೆಟ್ರೋಲ್ 90.76ರು- ಡೀಸೆಲ್ 83.78 ರು
ಹೈದರಾಬಾದ್: ಪೆಟ್ರೋಲ್ 94.16 ರು- ಡೀಸೆಲ್ 88.25ರು
ಗುರುಗ್ರಾಮ: ಪೆಟ್ರೋಲ್ 88.54 ರು- ಡೀಸೆಲ್ 81.51 ರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+