ಏ.28: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಎಷ್ಟು?

ಬೆಂಗಳೂರು, ಏಪ್ರಿಲ್ 28: ಪ್ರಮುಖ ತೈಲ ಕಂಪನಿಗಳು ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿಲ್ಲ. 13 ದಿನಗಳಿಂದ ಬೆಲೆ ಪರಿಷ್ಕರಣೆಗೊಂಡಿಲ್ಲ. ಪಶ್ಚಿಮ ಬಂಗಾಳದಲ್ಲಿ ನಾಳೆ ಕೊನೆ ಹಂತದ ಮತದಾನ ನಡೆಯಲಿದ್ದು, ಏ.30ರಿಂದ ಇಂಧನ ದರ ಪರಿಷ್ಕರಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಇತ್ತೀಚೆಗೆ ದೇಶದ ಪ್ರಮುಖ ನಗರಗಳಲ್ಲಿ ಸತತ 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸಲಾಗಿತ್ತು. ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರಿಗೆ 16 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ 14 ಪೈಸೆಯನ್ನು ತಗ್ಗಿಸಲಾಗಿದೆ.

ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಪೆಟ್ರೋಲ್ ದರ 34ಪೈಸೆ ಇಳಿಕೆಯಾಗಿದ್ದು, 94.34 ರು ಪ್ರತಿ ಲೀಟರ್ ಹಾಗೂ ಡೀಸೆಲ್ ದರ 29ಪೈಸೆ ಇಳಿಕೆಯಾಗಿದ್ದು, 86.48ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.43 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.60 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಚುನಾವಣೆ ಹಿನ್ನೆಲೆಯಲ್ಲಿ ಬೆಲೆ ಪರಿಷ್ಕರಿಸಿರಲಿಲ್ಲ

ಚುನಾವಣೆ ಹಿನ್ನೆಲೆಯಲ್ಲಿ ಬೆಲೆ ಪರಿಷ್ಕರಿಸಿರಲಿಲ್ಲ

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಏಪ್ರಿಲ್ 28ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿ 67.66 ಯುಎಸ್ ಡಾಲರ್(1 USD=74.46ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ

ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ

ಈ ನಡುವೆ ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ ಎಂದು ಅಂಕಿ ಅಂಶ ತಿಳಿಸಿದೆ. ಡಿಸೆಂಬರ್ 2019ರ ನಂತರ ಭಾರಿ ಬೇಡಿಕೆ ಇದೀಗ ಕಂಡು ಬಂದಿದೆ. ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪೆಟ್ರೋಲ್ ಶೇ 27.4 ರಷ್ಟು ಅಧಿಕ ಮಾರಾಟ ಕಂಡು ಬಂದಿದೆ. ಇದೇ ವೇಳೆ ಡಿಸೇಲ್ ಬಳಕೆ ಶೇ 27.6ರಷ್ಟು ಏರಿಕೆಯಾಗಿದೆ. ಇನ್ನು ಮೇ ಮೊದಲ ವಾರದಲ್ಲಿ ಚುನಾವಣೆ ಬಳಿಕ ಇಂಧನ ದರ ಪೆಟ್ರೋಲ್ 2 ರು ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ಏರಿಕೆಯಾಗುವ ಸಾಧ್ಯತೆಯಿದೆ.

ತೈಲ ಬೆಲೆ ನಿರ್ಧಾರ ಹೇಗೆ?

ತೈಲ ಬೆಲೆ ನಿರ್ಧಾರ ಹೇಗೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+