ಮೇ 03: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಎಷ್ಟು?

ಬೆಂಗಳೂರು, ಮೇ 03: ಪ್ರಮುಖ ತೈಲ ಕಂಪನಿಗಳು ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿಲ್ಲ. ಪ್ರಮುಖ ತೈಲ ಕಂಪನಿಗಳು ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿರಲಿಲ್ಲ. ದೆಹಲಿಯಲ್ಲಿ ಪೆಟ್ರೋಲ್ 90.40 ರು ಪ್ರತಿ ಲೀಟರ್, ಡೀಸೆಲ್ ಬೆಲೆ 80.73 ರು ಪ್ರತಿ ಲೀಟರ್ ನಂತೆ ಮಾರಾಟವಾಗುತ್ತಿದೆ.

ಇತ್ತೀಚೆಗೆ ದೇಶದ ಪ್ರಮುಖ ನಗರಗಳಲ್ಲಿ ಸತತ 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸಲಾಗಿತ್ತು. ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರಿಗೆ 16 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ 14 ಪೈಸೆಯನ್ನು ತಗ್ಗಿಸಲಾಗಿತ್ತು.

ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಪೆಟ್ರೋಲ್ ದರ 34ಪೈಸೆ ಇಳಿಕೆಯಾಗಿದ್ದು, 94.34ರು ಪ್ರತಿ ಲೀಟರ್ ಹಾಗೂ ಡೀಸೆಲ್ ದರ 29ಪೈಸೆ ಇಳಿಕೆಯಾಗಿದ್ದು, 86.48ರು ನಷ್ಟಿದೆ. ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.43 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.60 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಚುನಾವಣೆ ಹಿನ್ನೆಲೆಯಲ್ಲಿ ಬೆಲೆ ಪರಿಷ್ಕರಿಸಿರಲಿಲ್ಲ:

ಚುನಾವಣೆ ಹಿನ್ನೆಲೆಯಲ್ಲಿ ಬೆಲೆ ಪರಿಷ್ಕರಿಸಿರಲಿಲ್ಲ:

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ.

ಚುನಾವಣೆ ಫಲಿತಾಂಶ ಮೇ 2ರಂದು ಹೊರ ಬಂದಿದ್ದು, ಬಳಿಕ ಪೆಟ್ರೋಲ್ ಬೆಲೆ 2ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 3 ರು ಪ್ರತಿ ಲೀಟರ್ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಇತ್ತು. ಆದರೆ, ಈಗ ಮಾರುಕಟ್ಟೆಯಲ್ಲಿನ ನಷ್ಟ ಸರಿದೂಗಿಸಲು ಪೆಟ್ರೋಲ್ ದರ 5ರು ಪ್ರತಿ ಲೀಟರ್ ಹಾಗೂ ಡೀಸೆಲ್ 3 ರು ಪ್ರತಿ ಲೀಟರ್ ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ತೈಲ ಕಂಪನಿಗಳು ಹೇಳಿವೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಮೇ 03ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

ಲಾಕ್ ಡೌನ್ ಇರುವುದರಿಂದ ವಹಿವಾಟು ತಗ್ಗಿದೆ

ಲಾಕ್ ಡೌನ್ ಇರುವುದರಿಂದ ವಹಿವಾಟು ತಗ್ಗಿದೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ದರ ಪರಿಷ್ಕರಣೆ ಮಾಡದಿರುವುದರಿಂದ ಪ್ರಮುಖ ತೈಲ ಸಂಸ್ಥೆಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ನಷ್ಟ ಅನುಭವಿಸಿವೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 77 ಪೈಸೆ ಹಾಗೂ 74 ಪೈಸೆ ಪ್ರತಿ ಲೀಟರ್‌ಗೆ ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿ 67.55 ಯುಎಸ್ ಡಾಲರ್(1 USD=73.86ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

Recommended Video

    ಪಶ್ಚಿಮ‌ ಬಂಗಾಳ ಮತ್ತು ದೀದಿ ಬಗ್ಗೆ ಆಕ್ಷೇಪಾರ್ಹ ಪದ ಬಳಕೆಗೆ ಸಸ್ಪೆಂಡ್ ಮಾಡಿದ ಟ್ವಿಟ್ಟರ್ | Oneindia Kannada
    ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ

    ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ

    ಈ ನಡುವೆ ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ ಎಂದು ಅಂಕಿ ಅಂಶ ತಿಳಿಸಿದೆ. ಡಿಸೆಂಬರ್ 2019ರ ನಂತರ ಭಾರಿ ಬೇಡಿಕೆ ಇದೀಗ ಕಂಡು ಬಂದಿದೆ. ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪೆಟ್ರೋಲ್ ಶೇ 27.4 ರಷ್ಟು ಅಧಿಕ ಮಾರಾಟ ಕಂಡು ಬಂದಿದೆ. ಇದೇ ವೇಳೆ ಡಿಸೇಲ್ ಬಳಕೆ ಶೇ 27.6ರಷ್ಟು ಏರಿಕೆಯಾಗಿದೆ. ಆದರೆ, ಏಪ್ರಿಲ್ ತಿಂಗಳಲ್ಲಿ ಇಂಧನ ಬಳಕೆ ಕುಸಿತವಾಗಿದೆ. ಹಲವು ರಾಜ್ಯಗಳಲ್ಲಿ ಕೋವಿಡ್ 19 ಕಾರಣ ಲಾಕ್ ಡೌನ್ ಇರುವುದರಿಂದ ವಹಿವಾಟು ತಗ್ಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+